ಕೊಡಗು | ಅರಣ್ಯ ವಿದ್ಯಾರ್ಥಿಗಳ ಪ್ರತಿಭಟನೆ; ಸಮಸ್ಯೆ ಪರಿಹರಿಸುವುದಾಗಿ ಶಾಸಕ ಪೊನ್ನಣ್ಣ ಭರವಸೆ

Date:

ಕೊಡಗು ಜಿಲ್ಲೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದ್ದು, ಸಮಸ್ಯೆಗಳನ್ನು ಪರಿಹರಿಸುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೇ.100ರಷ್ಟು ನೇರ ನೇಮಕಾತಿ ಮಾಡುವಂತೆ ಒತ್ತಾಯಿಸಿ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಅವರು ಕೊಡಗಿನ ಬಿಎಸ್‌ಸಿ ಅರಣ್ಯ ಕಾಲೇಜಿಗೆ ಭಾನುವಾರ ಭೇಟಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದ್ದು, ಸಿಎಂ ಮತ್ತು ಅರಣ್ಯ ಸಚಿವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಇಲಾಖೆಯಲ್ಲಿ ಆರ್‌ಎಫ್‌ಒ ಹುದ್ದೆಗಳಿಗೆ ಅರಣ್ಯ ಪದವೀಧರರ ನೇರ ನೇಮಕಾತಿಯ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡಲು ಒಲವು ತೋರಿದ ಆಡಳಿತ ಸುಧಾರಣಾ ಆಯೋಗದ ಮುಖ್ಯಸ್ಥ ವಿಜಯ್ ಭಾಸ್ಕರ್ ಅವರ ಶಿಫಾರಸುಗಳಿಗೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಮೂರು ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು ಫ್ರೀಡಂ ಪಾರ್ಕ್‌ನಲ್ಲಿ ಒಟ್ಟುಗೂಡಲು ಯೋಜಿಸಿದ್ದಾರೆ” ಎಂದು ದೃಢಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಮಾ 2ರಂದು ಪಂಚಾಯತ್ ರಾಜ್ ಹಾಗೂ ನಗರಾಡಳಿತ ಪ್ರತಿನಿಧಿಗಳ ಕ್ರೀಡಾಕೂಟ

“ಬಿಎಸ್‌ಸಿ ಅರಣ್ಯ ವಿಶೇಷ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದಿಟ್ಟ ಕೆಲವು ಬೇಡಿಕೆಗಳು ಕಾನೂನುಬದ್ಧವಾಗಿವೆ. ಈ ಬಗ್ಗೆ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ. ಅರಣ್ಯ ಸಚಿವರೊಂದಿಗೆ ಸಭೆ ನಿಗದಿಪಡಿಸುವುದಾಗಿ ನಾನು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದೇನೆ. ತರಗತಿಗಳಿಲ್ಲದೆ ವಿದ್ಯಾರ್ಥಿಗಳು 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ಇದು ಆದ್ಯತೆಯ ವಿಷಯವಾಗಿದೆ. ಅವರ ಸಮಸ್ಯೆಗಳ ಬಗ್ಗೆ ಸಿಎಂ ಗಮನಕ್ಕೆ ತರುತ್ತೇನೆ. ವಿದ್ಯಾರ್ಥಿಗಳು ಇದೀಗ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಬೇಕು” ಎಂದು ವಿನಂತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...