ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

Date:

ಕೊಡಗು ಜಿಲ್ಲೆ,ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿ, ಕರ್ನಾಟಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ದಿನಾಂಕ 28-03-2025 ರಂದು ಮಧ್ಯಾಹ್ನ ಸುಮಾರು 01.30 ಗಂಟೆಗೆ ಬೇಗೂರು ಗ್ರಾಮ ಬಾಳಂಗಾಡು ಪ್ರದೇಶದ ಒಂಟಿ ಮನೆಯಲ್ಲಿ ನಾಲ್ಕು ಜನರ ಕೊಲೆಯಾಗಿರುವ ಕುರಿತು ಮಾಹಿತಿ ಬಂದಿದ್ದು, ಸದರಿ ಘಟನೆ ಸ್ಥಳಕ್ಕೆ ಮೈಸೂರಿನ ದಕ್ಷಿಣ ವಲಯ ಐಜಿಪಿ ಡಾ ಎಂ ಬಿ ಬೋರಲಿಂಗಯ್ಯ, ಪೊಲೀಸ್ ಅಧೀಕ್ಷಕ ಕೆ ರಾಮರಾಜನ್,ಅಪರ ಪೊಲೀಸ್ ಅಧೀಕ್ಷಕ ಸುಂದರ್ ರಾಜ್, ಡಿಎಸ್‌ಪಿ ಮಹೇಶ್ ಕುಮಾರ್ ವಿರಾಜಪೇಟೆ ಉಪವಿಭಾಗ, ಶಿವರಾಜ್ ಮುಧೋಳ್ ಸಿಪಿಐ ಗೋಣಿಕೊಪ್ಪ ವೃತ್ತ, ನವೀನ್ ಪಿಎಸ್‌ಐ ಪೊನ್ನಂಪೇಟೆ ಪೊಲೀಸ್ ಠಾಣೆ ಮತ್ತು ಅಪರಾಧ ಪತ್ತೆ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯದ ಕುರಿತು ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದರು.

ದೂರುದಾರರು ನೀಡಿದ ಮಾಹಿತಿ ಅನ್ವಯ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಡಿಎಸ್‌ಪಿ, ವಿರಾಜಪೇಟೆ ಉಪ ವಿಭಾಗ ರವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಗೂರು ಗ್ರಾಮ ಬಾಳಂಗಾಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ (30) , ಮತ್ತು ಕಾವೇರಿ ( 6) ವರ್ಷ ಹಾಗೂ ಗಿರೀಶ್ (38) ಒಂಟಿ ಮನೆಯಲ್ಲಿ ವಾಸವಿದ್ದು, ಆರೋಪಿ ನಾಗಿಯ ಮೂರನೇ ಗಂಡನಾಗಿದ್ದು ಒಂದು ವರ್ಷದಿಂದ ಒಟ್ಟಿಗೆ ವಾಸವಿದ್ದರು.

ನಾಗಿಯ ಎರಡನೇ ಗಂಡನಾದ ಸುಬ್ರಮಣಿಯೊಂದಿಗೆ ಮತ್ತೆ ಸಂಬಂಧವಿರುವ ಬಗ್ಗೆ ಸಂಶಯದಿಂದ ಆರೋಪಿ ಗಿರೀಶ ದಿ 27-03-2025 ರಂದು ರಾತ್ರಿ ಸಮಯದಲ್ಲಿ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಲೆ ಮರೆಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ.

ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಎಎಸ್ಐಟಿ ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಆರೋಪಿ ಮೂಲತಃ ಕೇರಳವಾದವನಾಗಿದ್ದು. ವೈನಾಡು ಜಿಲ್ಲೆಯ ತಿರುನಲ್ಲಿ ಬಳಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ. ಕೂಲಿ ಕೆಲಸಕ್ಕಾಗಿ ಇಡೀ ಕುಟುಂಬ ವಲಸೆ ಬಂದು ಕೊಡಗಿನ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...