ನಮ್ಮ ಬದುಕಿನಲ್ಲಿ ಕನ್ನಡತನವನ್ನು ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.
ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
“ಕಲೆ, ಸಂಸ್ಕೃತಿ ಹಾಗೂ ರಾಜ್ಯದ ಶ್ರೀಮಂತ ಪರಂಪರೆಯನ್ನು ರಕ್ಷಿಸುವ ಮತ್ತು ಉತ್ತೇಜಿಸುವ ಬದ್ಧತೆಯನ್ನು ಸರ್ಕಾರ ಹೊಂದಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಕನ್ನಡ ನಾಡು, ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಇದಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸಿದ ಅವರು ಪಥ ಸಂಚಲನದಲ್ಲಿ ಭಾಗಿಯಾಗಿದ್ದ 19 ಹಲವು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.




