ಕೊಡಗು | ಕೇರಳ ಮೂಲದ ಹಣಕಾಸು ಸಂಸ್ಥೆಯಿಂದ ಗ್ರಾಹಕರಿಗೆ ವಂಚನೆ; ಆರೋಪಿ ಬಂಧನ

Date:

ಕೇರಳ ಮೂಲದ ಹಣಕಾಸು ಸಂಸ್ಥೆಯಿಂದ ಕೊಡಗು ಜಿಲ್ಲೆಯ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಗೋಣಿಕೊಪ್ಪಲಿಗೆ ಕರೆತಂದಿದ್ದಾರೆ.

ಮಲಬಾರ್ ಮಲ್ಟಿ ಸ್ಟೇಟ್ ಆಗ್ರೋ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್‌ನ ಸಿಇಒ ಸನ್ನಿ ಅಬ್ರಹಾಂ(50) ಎಂಬಾತ ಬಂಧಿತ ಆರೋಪಿ.

ಕೊಡಗು ಜಿಲ್ಲೆಯ ಕುಶಾಲನಗರ, ಗೋಣಿಕೊಪ್ಪ, ವಿರಾಜಪೇಟೆ ತಾಲೂಕುಗಳಲ್ಲಿ ಕೇರಳ ಮೂಲದ ‘ಮಲಬಾರ್ ಮಲ್ಟಿ ಸ್ಟೇಟ್ ಆಗ್ರೋ ಕೋ-ಆಪರೇಟಿವ್ ಸೊಸೈಟಿ’ ಎಂಬ ಹಣಕಾಸು ಸಂಸ್ಥೆಗಳನ್ನು ವಿವಿಧೆಡೆ ತೆರೆದಿದ್ದರು. ಕುಶಾಲನಗರ ದಂಡಿನಪೇಟೆಯಲ್ಲಿರುವ ಶಾಖೆಯಲ್ಲಿ ಬೈಲುಕುಪ್ಪೆ ನಿವಾಸಿ ಚಂದ್ರಹಾಸ ₹99,500 ಪಿಗ್ಮಿ ಕಟ್ಟಿದ್ದರು. ಆದರೆ ಶಾಖೆಯವರು ಹಣ ಹಿಂದಿರುಗಿಸದೆ, ಕಚೇರಿಗೆ ಬೀಗ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡಗು ಜಿಲ್ಲೆಯಲ್ಲಿ ಮಲಬಾರ್ ಮಲ್ಟಿಸ್ಟೇಟ್ ಆಗ್ರೋ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೆಸರಿನಲ್ಲಿ ಕಚೇರಿ ತೆರೆದು ಸುತ್ತಮುತ್ತಲಿನ ಹಲವು ಗ್ರಾಹಕರಿಂದ ಪಿಗ್ಮಿ ಕಲೆಕ್ಷನ್, ಆರ್‌ಡಿ ಹಾಗೂ ಬಾಂಡ್ ಮುಖಾಂತರ ಹಣ ಹೂಡಿಕೆ ಮಾಡಿಸಿಕೊಂಡು ಹಣ ಹಿಂತಿರುಗಿಸದೆ ಕಚೇರಿಯನ್ನು ಮುಚ್ಚಿ ಸಾರ್ವಜನಿಕರಿಗೆ ವಂಚಿಸಿ ತಲೆಮರೆಸಿಕೊಂಡಿದ್ದರು.

ಮಲಬಾರ್ ಮಲ್ಟಿ ಸ್ಟೇಟ್ ಆಗ್ರೋ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್‌ನ ಮುಖ್ಯಸ್ಥ ರಾಹುಲ್ ಚಕ್ರಪಾಣಿ, ಸಿಇಒ ಸನ್ನಿ ಅಬ್ರಹಾಂ ಮತ್ತು ಸಹಚರರು ಒಗ್ಗೂಡಿ ಜನಗಳಿಗೆ ವಂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಕ್ಕಳ ಅಪಹರಣ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಬಂಧನ, ಮಕ್ಕಳ ರಕ್ಷಣೆ

ಸದರಿ ವಂಚನೆ ಕುರಿತಾಗಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಕಲಂ 406, 420 ರೆ/ವಿ ಐಪಿಸಿ ಮತ್ತು ಕಲಂ 21, 22, 23 ಅನಿರ್ಬಂಧಿತ ಠೇವಣಿ ಸ್ಕೀಮ್‌ಗಳ ನಿಷೇಧ ಕಾಯ್ದೆ-2019(ಬಿಯುಡಿಎಸ್‌) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಅನ್ವಯ ಪೊಲೀಸರು ಆರೋಪಿಗಳ ಜಾಡನ್ನು ಹಿಡಿದು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ತೆರಳಿ, ಸಂಸ್ಥೆಯ ಸಿಇಒ ಸನ್ನಿ ಅಬ್ರಹಾಂ(58) ಎಂಬಾತನನ್ನು ಬಂಧಿಸಿ ಗೋಣಿಕೊಪ್ಪಲಿಗೆ ಕರೆತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...