ಕೊಡಗು | ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು

Date:

ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದ್ದು, ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು ಬೀರಿದೆ.

ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ನಿರ್ದೇಶನದನ್ವಯ ರಾಜ್ಯ ಪೊಲೀಸರು ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಇತರ ಪಟಾಕಿಗಳ ಮಾರಾಟ, ಪೂರೈಕೆ ಮೇಲೆ ರಾಜ್ಯದೆಲ್ಲೆಡೆ ನಿಗಾ ಇರಿಸಿದ್ದಾರೆ.

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ವಹಿವಾಟು ನಡೆಸಲು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಆನ್‌ಲೈನ್‌ನಲ್ಲಿಯೂ ಪಟಾಕಿ ವ್ಯಾಪಾರ ಜೋರಾಗಿದೆ. ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸುವಂತೆ ರಾಜ್ಯ ಸರ್ಕಾರವು ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಕೆಂಪು ಪಟಾಕಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಪರಿಸರಕ್ಕೆ ಹಾನಿಯುಂಟುಮಾಡುವ ಪಟಾಕಿ ವ್ಯವಹಾರ, ಮಾರಾಟ, ಖರೀದಿ ಬಗ್ಗೆ ನಿಗಾ ಇಡಲು ಖಾಕಿಪಡೆ ಸಜ್ಜಾಗಿದೆ.‌ ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಪಟಾಕಿಗಳನ್ನು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪಟಾಕಿ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಇನ್ನಷ್ಟು ಬಿಗಿಯಾಗಿ ಕಣ್ಗಾವಲು ಇರಿಸಲು ಕ್ರಮ ಕೈಗೊಂಡಿದ್ದಾರೆ.

ಹಸಿರು ಪಟಾಕಿ ಹೊರತುಪಡಿಸಿ, ಇತರ ಪಟಾಕಿಗಳ ಮಾರಾಟ ಮಾಡುವ ಬಗ್ಗೆ ಕೆಎಸ್‌ಪಿಸಿಬಿ ಮೇಲ್ವಿಚಾರಣೆ ಮಾಡುತ್ತಿದೆ. ಪಟಾಕಿ ಉತ್ಪಾದನೆ ಮಾಡುವ ಘಟಕವಿದ್ದರೆ ಮಾತ್ರ ಅಂತಹ ಕಡೆ ದಾಳಿ ನಡೆಸಿ ಅವುಗಳನ್ನು ಜಪ್ತಿ ಮಾಡಲು ಕೆಎಸ್‌ಪಿಸಿಬಿಗೆ ಅವಕಾಶಗಳಿವೆ. ಆದರೆ ಕರ್ನಾಟಕದಲ್ಲಿ ಪಟಾಕಿ ಉತ್ಪಾದನ ಘಟಕಗಳಿಲ್ಲ. ಇಲ್ಲಿನ ವಾತಾವರಣದಲ್ಲಿ ತೇವಾಂಶ ಅಧಿಕವಾಗಿರುವ ಹಿನ್ನಲೆಯಲ್ಲಿ ಪಟಾಕಿ ಉತ್ಪಾದನೆಗೆ ಕರ್ನಾಟಕ ಸೂಕ್ತವಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಡಹಗಲೇ ವ್ಯಕ್ತಿಗೆ ಚೂರಿ ಇರಿದು ಹತ್ಯೆ

ಪಟಾಕಿ ಉತ್ಪಾದಿಸಿದರೂ, ಸಿಡಿಸಲು ಯೋಗ್ಯವಾಗಿರುವುದಿಲ್ಲ. ಈ ಎಲ್ಲ ಕಾರಣಗಳಿಂದ ಹೊರರಾಜ್ಯಗಳಿಂದ ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಾಗಿ ಕರ್ನಾಟಕಕ್ಕೆ ಪಟಾಕಿಗಳು ಬರುತ್ತಿವೆ.

ಗ್ರಾಹಕರು ಕೊಳ್ಳುವ ಪಟಾಕಿಗಳು ಹಸಿರು ಪಟಾಕಿ ಹೌದೇ? ಇಲ್ಲವೇ? ಎಂಬುದನ್ನು ಖಾತರಿಪಡಿಸಿಕೊಳ್ಳಲು ಪಟಾಕಿ ಪ್ಯಾಕ್‌ನ ಮೇಲಿರುವ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಅರಿತುಕೊಳ್ಳಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...