ಕೊಡಗು | ಕೆಎಸ್‌ಆರ್‌ಟಿಸಿ ಬಸ್‌ ಚಾಲನೆ ವೇಳೆ ಮೊಬೈಲ್ ಬಳಕೆ; ಚಾಲಕ ಬಂಧನ

Date:

ವಾಹನಗಳ ಚಾಲನೆ ವೇಳೆ ಮೊಬೈಲ್‌ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್‌ಆರ್‌ಟಿಸಿಯ ಚಾಲಕರೊಬ್ಬರು ಬಸ್‌ ಚಾಲನೆ ವೇಳೆ ಮೊಬೈಲ್‌ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ ವೈರಲ್‌ ಆಗಿದ್ದು, ಚಾಲಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿಪೋ ಬಸ್​ ಚಾಲಕ ವೇಣುಗೋಪಾಲ್ ಎಂಬವರನ್ನು ಬಂಧಿಸಲಾಗಿದೆ. ವೇಣುಗೋಪಾಲ್ ಅವರನ್ನು ಚಾಲನೆಗೆ ನಿಯೋಜಿಸಲಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಡಿಕೇರಿಯಿಂದ ಬಿರುನಾಣಿಗೆ ಪ್ರಯಾಣಿಸುತ್ತಿತ್ತು. ಈ ವೇಳೆ, ಚಾಲಕ ಬಳಕೆ ಮಾಡಿದ್ದಾರೆ. ಅದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ, ಚಾಲನೆ ವೇಳೆ ಮೊಬೈಲ್‌ ಬಳಸುತ್ತಿರುವುದನ್ನು ನಿರ್ವಾಹಕ ರೂಪೇಶ್‌ ಕೂಡ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ವೇಣುಗೋಪಾಲ್, ರೂಪೇಶ್‌ ಜೊತೆಗೆ ಗಲಾಟೆ ಮಾಡಿದ್ದಾರೆ. ಮಾತ್ರವಲ್ಲದೆ, ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ ಗುಂಡು ಹಾರಿಸಿ, ರೂಪೇಶ್‌ನನ್ನು ಕೊಲೆ‌ ಮಾಡುವುದಾಗಿ ವೇಣುಗೋಪಾಲ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇಣುಗೋಪಾಲ್‌ ಅವರ ವರ್ತನೆಯ ವಿರುದ್ಧ ಕ್ರಮ ಕೈಗೊಂಡಿರುವ ಸಾರಿಗೆ ಸಂಸ್ಥೆ, ಅವರನ್ನು ಅಮಾನತು ಮಾಡಿದೆ. ಮಡಿಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರು ಆರೋಪಿ ವೇಣುಗೋಪಾಲ್​ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...