ಪ್ರತ್ಯೇಕ ಬಸ್‌ ಅಪಘಾತ 10ಕ್ಕೂ ಹೆಚ್ಚು ಮಂದಿ ಸಾವು

Date:

  • ಮಡಿಕೇರಿ ಮತ್ತು ಮಂಗಳೂರು ಹೆದ್ದಾರಿಯಲ್ಲಿ ಕಾರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ
  • ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇನ್ನಾವಾ ಕಾರಿಗೆ ಖಾಸಗಿ ಬಸ್‌ ಡಿಕ್ಕಿ

ಮಡಿಕೇರಿ ಮತ್ತು ತುಮಕೂರು ಬಳಿ ಪ್ರತ್ಯೇಕ ಬಸ್‌ ಅಪಘಾತವಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆಎಸ್‌ಆರ್‌ಟಿ ಬಸ್ ಮತ್ತು ಮಾರುತಿ ಕಾರ್‌ ನಡುವೆ ಡಿಕ್ಕಿ ಆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನ ಮೃತಪಟ್ಟಿರುವ ಘಟನೆ ಮಡಿಕೇರಿ-ಮಂಗಳೂರು ನಡುವಿನ ಹೆದ್ದಾರಿಯಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ 8 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಮಂಡ್ಯ ಜಿಲ್ಲೆಯ ಮದ್ದೂರು ಮೂಲದವರು ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಮಂಡ್ಯದಿಂದ ಮಂಗಳೂರಿಗೆ ತೆರಳುತ್ತಿದ್ದರು. ಕೆಎಸ್ಆರ್‌ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿತ್ತು. ಈ ವೇಳೆ ಈ ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? : ಹೊಸ ತಲೆಮಾರಿಗೆ ಹಳೆಯ ನೆನಪು 4 | ಸಿಹಿ ನೀರಿನ ಕಣಜ ಅಕ್ಕಿತಿಮ್ಮನಹಳ್ಳಿ ಕೆರೆ ಮೇಲಿದೆ ‘ಹಾಕಿ ಕ್ರೀಡಾಂಗಣ

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗಾಯಗೊಂಡಿರುವ ಓರ್ವ ವ್ಯಕ್ತಿ ಮತ್ತು ಮಗು ಗಂಭೀರ ಸ್ಥಿತಿಯಲ್ಲಿದ್ದು, ಸುಳ್ಯ ಕೆವಿಜಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರಿನಲ್ಲಿಯೂ ಅಪಘಾತ

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರ್‌ಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಿರೇಹಳ್ಳಿ ಸಮೀಪ ಇಂದು (ಶುಕ್ರವಾರ) ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಬೆಂಗಳೂರಿನ ವಿಜಯನಗರದ ನಿವಾಸಿಗಳೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...