ಕೊಡಗು | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ; ರಾಜ್ಯದ ಮೊದಲ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕ

Date:

ಕರ್ನಾಟಕ ಸರ್ಕಾರದಲ್ಲಿ ಪ್ರತಿಷ್ಠಿತ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಮೊಟ್ಟ ಮೊದಲ ಬಾರಿಗೆ ರಾಜ್ಯದ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕಗೊಂಡಿದ್ದಾರೆ.

ಕೊಡಗಿನವರಾದ ಪಿ ಎ ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿಸಿಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನವರಾದ ಇವರು ಮೈಸೂರು, ಮಂಡ್ಯ, ಹುಣಸೂರು, ಮಡಿಕೇರಿಯಲ್ಲಿ ಡಿಸಿಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿಸಿಎಫ್ ಆಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದರೆಂಬ ಪ್ರಶಂಸೆಗೆ ಒಳಗಾಗಿದ್ದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ, ಕರ್ನಾಟಕ ಗಡಿ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿಭಾಗವನ್ನೂ ಕೂಡ ಹೊಂದಿದ್ದು, ಇಲ್ಲಿ ನಿರಂತರ ಕಾಡುಪ್ರಾಣಿಗಳ ಬೇಟೆ, ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ ಎ ಸೀಮಾ ಆಯ್ಕೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ವೃದ್ಧೆಯ ಮನೆ ಕಳ್ಳತನ ; ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ಇವರ ಹಿನ್ನಲೆ: ಭಾರತೀಯ ಅರಣ್ಯ ಸೇವೆ(ಐಎಫ್‌ಎಸ್) ಅಧಿಕಾರಿ‌, ಮೂಲತಃ ನಾಪೋಕ್ಲುವಿನ ಪಾಡ್ಯಮಂಡ ಆನಂದ್-ಕಮಲ ದಂಪತಿಯ ಪುತ್ರಿ, ಮತ್ತೂರು ಗ್ರಾಮದ ಪುತ್ತಾಮನೆ ಡಾ ಅಶೋಕ್, ಶಾಂತಿರವರ ಸೊಸೆ, ಪುತ್ತಾಮನೆ ರಂಜನ್ ಪತ್ನಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...