ಕೊಡಗು | ಆದಿವಾಸಿಗಳ ಕುರಿತು ವರದಿಗೆ ಬಂದ ಪತ್ರಕರ್ತನನ್ನು ವಶಕ್ಕೆ ಪಡೆದ ಪೊಲೀಸರು

Date:

ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೇರಳದ ಪತ್ರಕರ್ತ ರಿಜಾಸ್ ಅವರು ತಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. “ನಾನು ಆದಿವಾಸಿಗಳ ವಾಸಸ್ಥಳಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಖಾಸಗಿ ಕಾರಿನಲ್ಲಿ ಬಂದ ಮೂವರು ಪೊಲೀಸರು ನಿರ್ಜನ ಪ್ರದೇಶದಲ್ಲಿ ಬಸ್ ನಿಲ್ಲಿಸಿ, ಯಾವುದೇ ವಾರಂಟ್ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲು ಬಂದಿದ್ದರು. ಕೆಲವು ನಿಮಿಷ ವಾಗ್ವಾದ ನಡೆದ ಬಳಿಕವೂ ನನ್ನನ್ನು ಅವರ ಕಾರಿನಲ್ಲಿ ಕೂರಿಸಿಕೊಂಡು ವಿರಾಜಪೇಟೆ ಪೊಲೀಸ್‌ ಠಾಣೆಗೆ ಕರೆದೊಯ್ದು, ವಿಚಾರಣೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ವಿಚಾರಣೆಯ ಬಳಿಕ ನನ್ನನ್ನು ಠಾಣೆಯಿಂದ ಕಳಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಅವರು ಇತರ 4 ಅಧಿಕಾರಿಗಳ ಸಮ್ಮುಖದಲ್ಲಿ ನನ್ನನ್ನು ವಿಚಾರಣೆ ನಡೆಸಿದರು. ‘ಅರ್ಬನ್ ನಕ್ಸಲರು ಕೊಚ್ಚಿಯಿಂದ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ’ ಎಂದು ಅವರು ಹೇಳಿದರು. ‘ಪ್ರಬಲ ಜಾತಿಯ ಉದ್ಯೋಗದಾತರಿಂದ ಆದಿವಾಸಿ ಕಾರ್ಮಿಕರು ಎದುರಿಸುತ್ತಿರುವ ಹಿಂಸಾಚಾರದ ಬಗ್ಗೆ ವರದಿ ಮಾಡಲು ಬಂದಿದ್ದೇನೆ. ಆದಿವಾಸಿಗಳ ಸಂಕಷ್ಟದ ಬಗ್ಗೆ ಮುಖ್ಯವಾಹಿನಿಯ ಮಾಧ್ಯಮಗಳು ವರದಿ ಮಾಡದ ಕಾರಣ ನಾನು ಸ್ವಯಂಪ್ರೇರಿತನಾಗಿ ವರದಿ ಮಾಡಲು ಬಂದಿದ್ದೇನೆ’ ಎಂದು ನಾನು ಅಧಿಕಾರಿಗಳಿಗೆ ತಿಳಿಸಿದೆ. ನನ್ನ ಮಾತಿಗೆ ಪ್ರಿಕ್ರಿಯಿಸಿದ ಇನ್ಸ್‌ಪೆಕ್ಟರ್ ‘ನಾನು ನಕ್ಸಲ್‌ನಂತೆ ಮಾತನಾಡುತ್ತಿದ್ದೇನೆ’ ಎಂದರು” ಎಂದು ರಿಜಾಸ್ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 39

“ನನ್ನ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದು ಸಮಸ್ಯೆಯಲ್ಲ. ಆದರೆ, ಆದಿವಾಸಿ ಕಾರ್ಮಿಕರಿಗೆ ಹೊರಗಿನಿಂದ ಯಾರನ್ನೂ ಭೇಟಿಯಾಗಲು ಅವಕಾಶ ನೀಡದೇ ಇರುವುದು ಸಮಸ್ಯೆ” ಎಂದು ಅವರು ಹೇಳಿದ್ದಾರೆ.

ಪತ್ರಕರ್ತ ರಿಜಾಸ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್, “ಹೊರಗಿರನವರು ಯಾರು ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದ ಅವರನ್ನು ವಿಚಾರಣೆಗೆ ಒಳಪಡಿಸಿದ್ದೆವು. ರಿಜಾಸ್ ಮಾಡಿರುವ ಆರೋಪಗಳು ಮತ್ತು ಅವರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...