ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

Date:

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್‌(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿ ಮಾತನಾಡಿದರು.

“ನಾಪೋಕ್ಲು ವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ ಎಂ, ವಿರಾಜಪೇಟೆ ವಾಜಿದ್ ಸಿ ಇ, ನಾಪೋಕ್ಲು ಯಾಹ್ಯ ಸಿ ಎಚ್, ವಿರಾಜಪೇಟೆ ನಾಸೂರುದ್ದೀನ್ ಎಂ ಯು, ರಾಹುಫ್ ಎಂ ಎ ಗಾಂಜಾ ಆರೋಪಿಗಳಾಗಿದ್ದು, ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ ಎ ಪ್ರಕರಣದ ಪ್ರಮುಖ ಆರೋಪಿ” ಎಂದು ಮಾಹಿತಿ ನೀಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದ ಹಿನ್ನೆಲೆ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಇಟ್ಟುಕೊಂಡಿದ್ದು, ಆತನಿಂದ ವಿರಾಜಪೇಟೆಯ ರಾಹುಫ್ ಸೆಪ್ಟಂಬರ್‌ 23ರಂದು ವಿಮಾನದ ಮೂಲಕ ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಹೈಡ್ರೋ ಗಾಂಜಾವನ್ನು ತರಿಸಿ ತನ್ನ ಇತರ ಸಹಚಾರರೊಂದಿಗೆ ಮೈಸೂರು, ಗೋಣಿಕೊಪ್ಪ ಮಾರ್ಗವಾಗಿ ಬೆಳಗಿನ ಜಾವ ಆಗಮಿಸಿ, ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿಯಲ್ಲಿ ಕೆಲವರು ತಂಗಿದ್ದರು” ಎಂದು ತಿಳಿಸಿದ್ದಾರೆ.

ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದ ಸಂದರ್ಭ ಖಚಿತ ಮಾಹಿತಿ ತಿಳಿದ ಡಿಸಿಆರ್‌ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿ ಮಾರ್ಗದರ್ಶನದಂತೆ ಇತರ ಸಹಚರನ್ನು ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

“ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ, ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನುಪ್ ಮೇದಪ್ಪ ಹಾಗೂ ತಂಡ ಸೆಪ್ಟೆಂಬರ್ 29 ರಾತ್ರಿ 10:30ಕ್ಕೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...