ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!

Date:

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆಯಲ್ಲಿ ಪೊಲೀಸ್ ಪೇದೆಯೋರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ಕೊಲೆ ಯತ್ನ ನಡೆಸಿದ ಪೊಲೀಸ್ ಪೇದೆಯನ್ನು ಕೊಟ್ರೇಶ್​ (30) ಹಾಗೂ ಕೊಲೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಪ್ರಿಯತಮೆ ಆಯಿಷಾ (29) ಎಂಬಾಕೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್​ ಪೇದೆ ಕೊಟ್ರೇಶ್​​ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು. ಪ್ರೇಯಸಿ ಆಯಿಷಾಳ ಮನೆ ಪಕ್ಕದಲ್ಲಿ ವಾಸವಾಗಿದ್ದ. ಆಯಿಷಾ ಪೊಲೀಸ್ ಪೇದೆ ಕೊಟ್ರೇೆಶ್‌ನನ್ನು ಮಂಗಳವಾರ ಮಧ್ಯರಾತ್ರಿ ಮನೆಗೆ ಕರೆಸಿದ್ದಾಳೆ. ಬಳಿಕ ಕೊಟ್ರೇಶ್​​ ತಲೆದಿಂಬಿನಿಂದ ಉಸಿರುಗಟ್ಟಿಸಿ ಆಯಿಷಾಳ ಪತಿ ಇಫ್ರಾಝ್‌ರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಕದ ಕೋಣೆಯಲ್ಲಿ ಮಲಗಿದ್ದ ಇಫ್ರಾಜ್​​ ಅಕ್ಕನ ಮಗ ನೆರವಿಗೆ ಧಾವಿಸಿ ಬದಿದ್ದು, ಇಫ್ರಾಝ್​ ಜೀವ ಉಳಿಸಿದ್ದಾನೆ. ಈ ಘಟನೆಯಿಂದ ಆಯಿಷಾ ಹಾಗೂ ಪೇದೆ ಕೊಟ್ರೇಶ್ ನಡುವಿನ ವಿವಾಹೇತರ ಸಂಬಂಧ ಬಯಲಾಗಿದೆ.

ಪೊಲೀಸರು ಆರೋಪಿ ಕೊಟ್ರೇಶನ ವಿರುದ್ಧ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಇಫ್ರಾಝ್​ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋಗೆ ಪಿಕಪ್ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು; ಮೂವರಿಗೆ ಗಾಯ

ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೂಚನೆ ಮೇರೆಗೆ ಎಫ್​ಐಆರ್​ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...