ಕೊಡಗು | ಆಸ್ತಿ ವಿಚಾರ,ರಿವಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನ; ತಾಯಿ, ಮಗ ಪೊಲೀಸರ ವಶಕ್ಕೆ

Date:

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಹಲವು ವರ್ಷಗಳಿಂದ ಆಸ್ತಿ ಸಂಬಂಧವಾಗಿ ವಿವಾದವಿದ್ದು, ಗಾಯಾಳು ತಂದೆಯವರಾದ ಪೂವಪ್ಪ ಟಿಮ್ಸ್ ಅವರಿಗೆ ಕಂದಾಯ ಇಲಾಖೆಯ ದಾಖಲಾತಿಗಳಿಗೆ ಸಹಿ ಹಾಕಿಕೊಡದೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ಈ ಬಗ್ಗೆ ಕೇಳಿಕೊಂಡರು ಸ್ಪಂದಿಸದೆ ಇದ್ದಾಗ, ಮನೆಯ ಬಳಿಗೆ ತಾಯಿ ಮಗ ತೆರಳಿ ಕೇಳಿಕೊಂಡಾಗಲೂ ಕೂಡ ಸ್ಪಂದಿಸಿಲ್ಲ. ಮಾತಿಗೆ ಮಾತು ಬೆಳೆದು ರಿವಲ್ವಾರ್ ನಿಂದ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ.

ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ-13-05-2025 ರಂದು ಮಧ್ಯಾಹ್ನ 4-30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸ ಜಗಳ ನಿರತನಾಗಿದ್ದಾನೆ. ಜೋರಾದ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಟಿಮ್ಸ ನಿಂದಿಸಿದಲ್ಲದೆ,ತಲೆಗೆ ಹೊಡೆದಿದ್ದಾನೆ, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಲಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು. ವಿರಾಜಪೇಟೆ ಉಪ ವಿಭಾಗದ ಡಿಎಸ್ಪಿ ಮಹೇಶ್ ಕುಮಾರ್, ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಶ್ರೀಮಂಗಲ ಸಬ್ ಇನ್ಸ್ ಪೆಕ್ಟರ್ ರವೀಂದ್ರ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...