ಕೊಡಗು | ಕಟ್ಟೆಮಾಡು ಗ್ರಾಮದಲ್ಲಿ ಜ.2ರವರೆಗೆ ಸೆಕ್ಷನ್‌ 163 ಜಾರಿ

Date:

ಕೊಡಗು ಜಿಲ್ಲೆಯ ಮಡಿಕೇರಿಯ ಎಸ್ ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2ರವರೆಗೆ ಸೆಕ್ಷನ್‌ 163ನ್ನು ಜಾರಿಗೊಳಿಸಿದ್ದು, ಜನರ ಗುಂಪು ಸೇರುವಿಕೆ, ಪ್ರತಿಭಟನೆ, ಮೆರವಣಿಗೆ, ಜಾಥಾ, ಘೋಷಣೆಗಳಿಗೆ ತಡೆ ನೀಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ಅಹಿತಕರ ಘಟನೆ ನಡೆದಿದ್ದು, ಈ ವಿಚಾರವಾಗಿ ಸದರಿ ಸ್ಥಳದಲ್ಲಿ ಕಾನೂನು ಸುರಕ್ಷತೆಗಾಗಿ ಮಡಿಕೇರಿ ಉಪವಿಭಾಗೀಯ ದಂಡಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಸೆಕ್ಷನ್‌ 163ನ್ನು ಜಾರಿಗೊಳಿ ಆದೇಶಿಸಿದ್ದಾರೆ.

image 36 1

ಕಾನೂನು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ದತ್ತವಾದ ಅಧಿಕಾರದಂತೆ ಎಸ್ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 05 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಡಿಸೆಂಬರ್‌ 30ರ ಬೆಳಿಗ್ಗೆ 6ರಿಂದ ಜನವರಿ 2ರ ಬೆಳಿಗ್ಗೆ 6ರವರೆಗೆ 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ, ಪ್ರತಿಭಟನೆ, ಮೆರವಣಿಗೆ, ರ್‍ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡಗು ಜಿಲ್ಲಾಡಳಿತದಿಂದ ಸೋಮವಾರ ಶಾಂತಿ ಸಭೆ ನಡೆಸಲು ನಿರ್ಧಾರ

ಕಟ್ಟೆಮಾಡು ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಡಳಿತವು ಡಿಸೆಂಬರ್‌ 30ರ ಸೋಮವಾರ ಮಧ್ಯಾಹ್ನ 3ಕ್ಕೆ ಶಾಂತಿ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ ಎಂಬುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಘಟನೆ ಹಿನ್ನೆಲೆ

ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದಲ್ಲಿ ನೆಲೆನಿಂತಿರುವ ಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಪೂಜೆಯನ್ನು ಹಮ್ಮಿಕೊಳ್ಳಲಾಹಿತ್ತು. ಒಂದು ವರ್ಗದ ಜನರು ಸಾಂಪ್ರದಾಯಿಕ ಉಡುಪನ್ನು ತೊಟ್ಟುಕೊಂಡು ದೇವಾಲಯದ ಒಳಗೆ ಮತ್ತೊಂದು ಗುಂಪು ಪ್ರವೇಶಿಸದಂತೆ ನಿರ್ಬಂಧ ಹೇರಿದಾಗ ಘರ್ಷಣೆ ನಡೆದಿದೆ. ಸಾಂಪ್ರದಾಯಿಕ ಉಡುಪು ತೊಟ್ಟವರ ಜನಾಂಗದವರ ಸಂಖ್ಯೆ ಈ ಭಾಗದಲ್ಲಿ ಕಡಿಮೆಯಿದೆ ಎಂದು ಹೇಳಲಾಗಿದೆ. ನಂತರ ಅ ವರ್ಗದ ಜನರು ಶಾಂತಿ ಕಾಪಾಡಲು ದೇವಾಲಯದ ಹೊರಬಂದು ಈ ತೀರ್ಮಾನವನ್ನು ಪ್ರತಿಭಟಿಸಿದ್ದಾರೆ. ಘರ್ಷಣೆಯ ಸಂದರ್ಭ ಕಡಿಮೆ ಸಂಖ್ಯೆಯಲ್ಲಿರುವ ಜನಾಂಗದ ಮೇಲೆ ಕೆಲವರಿಂದ ಹಲ್ಲೆಗೆ ಯತ್ನಿಸಲಾಗಿದೆ ಆರೋಪಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾಡಳಿತದಿಂದ ವಿಶ್ವಮಾನವ ಕುವೆಂಪು ದಿನಾಚರಣೆ

ಇದೀಗ ಈ ‌ಪ್ರಕರಣವು ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಪ್ರಕರಣಕ್ಕೆ ತೆರೆ ಎಳೆಯುವಂತೆ ಸಂಸದ ಯದುವೀರ್ ಒಡೆಯರ್ ಮತ್ತು ಇಬ್ಬರು ಶಾಸಕರುಗಳಾದ ಎ ಎಸ್ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...