ಕೊಡಗು | ‘ಎಸ್ಐಆರ್’ನಿಂದಾಗಿ ಭಾರತೀಯರಿಗೆ ಸಂಕಷ್ಟ: ಅಬ್ದುಲ್ ಮಜೀದ್

Date:

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ‘ಎಸ್ಐಆರ್'(ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ)ನಿಂದಾಗಿ ಭಾರತೀಯರಿಗೆ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕ್ರಮದಿಂದ ಕೇವಲ ಮುಸಲ್ಮಾನರಿಗೆ ಮಾತ್ರ ತೊಂದರೆಯಾಗುವುದಿಲ್ಲ, ಬದಲಿಗೆ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಎನ್‌ಆರ್‌ಸಿ ವಿಚಾರ ಕೋರ್ಟ್ ನಲ್ಲಿರುವ ಕಾರಣ ಚುನಾವಣಾ ಆಯೋಗದ ಮೂಲಕ ಹಿಂಬಾಗಲಿನಿಂದ ಎಸ್‌ಐಆರ್ ಪರೀಕ್ಷೆಯನ್ನು ಒಡ್ಡಲಾಗಿದೆ. ಇದರಿಂದ, ಬಡವರು, ಕೂಲಿ ಕಾರ್ಮಿಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಈ ಹಿಂದೆ ಕಪ್ಪು ಹಣವನ್ನು ಹೊರ ತರಲು ಮತ್ತು ಭಯೋತ್ಪಾದನೆಯನ್ನು ತಡೆಯಲು ನೋಟ್ ಬ್ಯಾನ್ ಮಾಡುವುದಾಗಿ ಹೇಳಿ, ನೋಟ್ ಬ್ಯಾನ್ ಮಾಡಲಾಯಿತು. ಆದರೆ, ಕಪ್ಪು ಹಣ ಪತ್ತೆಯಾಗಲಿಲ್ಲ, ಭಯೋತ್ಪಾದನೆ ಕಡಿಮೆಯಾಗಲಿಲ್ಲ. ಇದೀಗ ನುಸುಳುಕೋರರನ್ನು ಪತ್ತೆ ಮಾಡಲು ಎಸ್‌ಐಆರ್ ತರಲಾಗಿದೆ ಎಂದು ಹೇಳುತ್ತಿದ್ದಾರೆ. ಇದೊಂದು ಮೂರ್ಖತನದ ನಿರ್ಧಾರವಾಗಿದೆ. ಎಸ್‌ಐಆರ್ ಎನ್ನುವುದು ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲ, ಇದು ಜನರನ್ನು ತೀವ್ರ ನಿಗಾ ಘಟಕಕ್ಕೆ ತಳ್ಳುವ ಮತ್ತು ಪೌರತ್ವದ ಅಗ್ನಿ ಪರೀಕ್ಷೆಗೆ ಒಡ್ಡುವ ಅಪಾಯಕಾರಿ ಕ್ರಮವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ 90 ಲಕ್ಷ ಜನರು ಮತದಾನದ ಹಕ್ಕಿನಿಂದ ಹೊರಗೂಳಿದಿದ್ದಾರೆ. ಇವರೆಲ್ಲರು ಮುಸಲ್ಮಾನರಲ್ಲ. ತಮಿಳುನಾಡಿನ ಜನಸಂಖ್ಯೆಯಲ್ಲಿ ಶೇ.6ರಷ್ಟು ಮಾತ್ರ ಮುಸಲ್ಮಾನರಿದ್ದಾರೆ. 90 ಲಕ್ಷ ಮಂದಿಯಲ್ಲಿ 20ಲಕ್ಷ ಮಂದಿ ಮುಸಲ್ಮಾನರಾದರೆ, ಉಳಿದ 70 ಲಕ್ಷ ಮಂದಿ ಇತರ ಜಾತಿ, ಜನಾಂಗಕ್ಕೆ ಸೇರಿದವರಾಗಿದ್ದಾರೆ. ಇವರೆಲ್ಲರೂ ಬಡವರು, ಕೂಲಿ ಕಾರ್ಮಿಕರೇ ಆಗಿದ್ದಾರೆ. ಈ ಕ್ರಮದಿಂದ ಮುಸಲ್ಮಾನರಿಗೆ ಮಾತ್ರ ತೊಂದರೆ ಎಂದು ಯಾರೂ ಭಾವಿಸಬಾರದು. ಆದ್ದರಿಂದ, ಇದರ ವಿರುದ್ಧ ಸರ್ವ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ಭಯಮುಕ್ತ ಸಮಾಜದ ನಿರ್ಮಾಣಕ್ಕಾಗಿ ಎಸ್‌ಡಿಪಿಐ ಹೋರಾಟ ನಡೆಸುತ್ತಿದೆ. ಇಂದು ದೇಶದಲ್ಲಿ ಬಿಜೆಪಿಯನ್ನು ಬಲವಾಗಿ ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ. ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ, ಆ ಪಕ್ಷಕ್ಕೆ ಇನ್ನು ಉಳಿಗಾವಿಲ್ಲ. ರಾಜಕೀಯವಾಗಿ ಕಾಂಗ್ರೆಸ್ ಗೆ ಇನ್ನೂ ಉಳಿದುಕೊಳ್ಳಬೇಕೆನ್ನುವ ಇಚ್ಛೆ ಇದ್ದರೆ ಅದು ಎಸ್‌ಡಿಪಿಐಗೆ ಬೆಂಬಲ ಸೂಚಿಸಲಿ ಎಂದರು.

ದೇಶಕ್ಕೆ ಅಚ್ಚೇ ದಿನ್ ಬರಲಿದೆ ಎಂದು ಎನ್‌ಡಿಎ ಸರಕಾರ ಘೋಷಿಸಿತು, ಆದರೆ, ಇಲ್ಲಿಯವರೆಗೆ ಪ್ರಜೆಗಳಿಗೆ ಒಳ್ಳೆಯ ದಿನಗಳು ಬರಲಿಲ್ಲ. ಎಸ್‌ಐಆರ್ ಎನ್ನುವುದು ಎನ್‌ಆರ್‌ಸಿಯ ಹಿಂಬಾಗಿಲಾಗಿದೆ, ಮತಗಳ್ಳತನದ ಷಡ್ಯಂತ್ರವಾಗಿದೆ. ಮೀಸಲಾತಿಯನ್ನು ಕಡಿತಗೊಳಿಸಿದಾಗ, ಹಿಜಾಬ್ ಗೆ ಆಕ್ಷೇಪ ಎತ್ತಿದಾಗ, ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಿದಾಗ, ಎನ್‌ಆರ್‌ಸಿಯ ಕುರಿತು ಪ್ರಸ್ತಾಪಿಸಿದಾಗ ಯಾವುದಕ್ಕೂ ನಾವು ಭಯಪಡಲಿಲ್ಲ. ಹೋರಾಟದ ಮೂಲಕವೇ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತೇವೆ. ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಸಂವಿಧಾನದ ಆಶಯದಂತೆ ಹಕ್ಕುಗಳನ್ನು ನೀಡುವುದು ನಮ್ಮ ಗುರಿಯಾಗಿದೆ ಎಂದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅಮೀನ್ ಮೊಹಿಸಿನ್ ಮಾತನಾಡಿ, ಎಸ್‌ಐಅರ್ ಎನ್ನುವುದು ನುಸುಳುಕೋರರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯಲ್ಲ, ದೇಶದ ಪೌರತ್ವವನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಬೆಟ್ಟ ಕೊರೆದು ಇಲಿ ಹಿಡಿಯುವ ಸಾಹಸ ಇದಾಗಿದೆ, ಇಲ್ಲಿಯವರೆಗೆ ಕೇವಲ ಇಬ್ಬರು ಬಾಂಗ್ಲಾ ದೇಶಿಗರನ್ನು ಮಾತ್ರ ಪತ್ತೆ ಮಾಡಲಾಗಿದೆ ಎಂದು ಆರೋಪಿಸಿದರು. ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಸಿದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 9 ಕೋಟಿ ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿದಿದ್ದಾರೆ.

ಮತದಾನದ ಹಕ್ಕನ್ನು ಸಾಬೀತು ಪಡಿಸಬೇಕಾದರೆ ಜನನ ಪ್ರಮಾಣ ಪತ್ರ, ಆಸ್ತಿ ಪತ್ರ, ಪಾಸ್ ಪೋರ್ಟ್ ಮೊದಲಾದ ದಾಖಲೆಗಳನ್ನು ಒದಗಿಸಬೇಕೆನ್ನುವ ನಿಯಮ ರೂಪಿಸಲಾಗಿದೆ. ದೇಶದ ಒಟ್ಟು ಜನಸಂಖ್ಯೆಯ ಶೇ.5 ಮಂದಿಯ ಬಳಿ ಶೇ.95ರಷ್ಟು ಆಸ್ತಿ ಇದೆ, ಉಳಿದ ಪ್ರಜೆಗಳ ಬಳಿ ಸ್ವಂತ ಆಸ್ತಿಯೇ ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯ ಹಿಂದೆ ಷಡ್ಯಂತ್ರ ಅಡಗಿದೆ, ಇದು ಕತ್ತಲೆ ಯುಗದ ಕಾನೂನಾಗಿದೆ, ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ. ರಾಜ್ಯ ಸರಕಾರ ವಿಶೇಷ ಅಧಿವೇಶನ ಕರೆದು ಪರಿಷ್ಕರಣೆಯ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಬೇಕು. ಕೊಡಗಿನ ಇಬ್ಬರು ಶಾಸಕರು ಈ ಕುರಿತು ಒತ್ತಡ ಹೇರಬೇಕು.
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ಅಶ್ರಫ್ ಮೌಲವಿ ಮೂವಾಟ್ಟುಪುಝ ಮಾತನಾಡಿ, ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಮುಸಲ್ಮಾನರಿಗೆ ಆ ಪಕ್ಷದಿಂದ ನ್ಯಾಯ ಸಿಗಲಿಲ್ಲ, ಇನ್ನು ಮುಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಟ ನಡೆಯುವುದಿಲ್ಲ. ಭಯಮುಕ್ತ ಸಮಾಜ ನಿರ್ಮಾಣ, ಮನುಷ್ಯತ್ವ, ಸಮಗ್ರ ಅಭಿವೃದ್ಧಿ, ಎಲ್ಲಾ ಮಕ್ಕಳಿಗೆ ಶಿಕ್ಷಣ, ಬಡವರಿಗೆ ಮನೆಗಳನ್ನು ನೀಡುವುದು ಎಸ್‌ಡಿಪಿಐ ಗುರಿಯಾಗಿದೆ. ಎಸ್‌ಡಿಪಿಐಗೆ ಕೇವಲ ಮತ ನೀಡಿದರೆ ಸಾಲದು ಪಕ್ಷವನ್ನು ಬಲಪಡಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಮಾತನಾಡಿ, ದೇಶ ಸೇವೆ, ಜನ ಸೇವೆ, ಅಂಬೇಡ್ಕರ್ ಸಿದ್ಧಾಂತ, ಸಂವಿಧಾನದ ಆಶಯಗಳನ್ನು ತಿಳಿಯದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಮುಂದೊಂದು ದಿನ ಎಸ್‌ಡಿಪಿಐಯನ್ನು ಎದುರಿಸಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗೂಡುವ ಕಾಲ ಬರಲಿದೆ. ಅಸಮಾನತೆ, ಅಸ್ಪೃಶ್ಯತೆ, ಅರಾಜಕತೆ, ಡ್ರಗ್ಸ್ ಜಾಲ ತಾಂಡವವಾಡುತ್ತಿದೆ, ಬಡವರು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಒಬ್ಬ ವ್ಯಕ್ತಿ, ಒಂದು ಕುಟುಂಬದ ಸುತ್ತ ರಾಜಕಾರಣ ಸುತ್ತುತ್ತಿದೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಟೀಕಿಸಿದರು.

ಪತ್ರಕರ್ತ ರಾ.ಚಿಂತನ್ ಮಾತನಾಡಿ, ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲು ಎಸ್‌ಐಆರ್ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ, ಕೋಟ್ಯಾಂತರ ಜನರಿಗೆ ತೊಂದರೆಯಾಗಲಿದೆ, ಇದೊಂದು ಸಂವಿಧಾನಬಾಹಿರ ಕ್ರಮವಾಗಿದ್ದು, ಅಧಿಕಾರದ ದುರುಪಯೋಗವಾಗಿದೆ ಎಂದು ಆರೋಪಿಸಿದರು.

ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳಿದ್ದರೂ ಮಹಿಳಾ ವಿರೋಧಿ, ಶಿಕ್ಷಣ ವಿರೋಧಿ ಸರಕಾರವಿದೆ. ಬುಳ್ಡೋಸರ್ ಬಳಸಿ ಮನೆಗಳನ್ನು ನೆಲಸಮಗೊಳಿಸುವಾಗ ವಿದ್ಯಾರ್ಥಿಗಳ ಸರ್ಟಿಫಿಕೇಟ್ ಗಳು ಬೆಲೆ ನೀಡಿಲ್ಲ, ಹಿಜಾಬ್ ಕುರಿತು ಸರಕಾರ ಮಾತು ಉಳಿಸಿಕೊಂಡಿಲ್ಲ ಎಂದು ಟೀಕಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಸಮಾವೇಶದಲ್ಲಿ ಉಸ್ಮಾನ್ ಸುಂಟಿಕೊಪ್ಪ, ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಕಾರ್ಯದರ್ಶಿ ಮೇರಿ ವೇಗಸ್, ಸದಸ್ಯ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಮೊಹಮ್ಮದ್ ಅಲಿ, ನಗರಸಭಾ ಸದಸ್ಯೆ ನೀಮಾ ಅರ್ಷದ್, ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೆ.ಸಿ.ಬಷೀರ್, ಅಬ್ದುಲ್ ಜಮೀರ್, ಫಾರುಕ್ ಖಾನ್, ಷರೀಫ್, ಭಾಷಾ, ಹನೀಫ್ ವಿರಾಜಪೇಟೆ, ಜಕ್ರಿಯ ಕುಶಾಲನಗರ, ಹಫೀಜ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...