ಕೊಡಗು | ಭಾವಚಿತ್ರವಿರುವ ಮತದಾರರ ಪಟ್ಟಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ವೇಳಾಪಟ್ಟಿ ಪ್ರಕಟ

Date:

ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಪ್ರತೀ ವರ್ಷ ಜನವರಿ 01 ನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಿಕೊಂಡು ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು.

ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ 28ರವರೆಗೆ ಸರಿಪಡಿಸಿಕೊಳ್ಳಲು, ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನವೆಂಬರ್ 09, 10, 23 ಮತ್ತು 24 ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ. ಡಿಸೆಂಬರ್ 24ರಂದು ಮನವಿ,ಆಕ್ಷೇಪಣೆಗಳ ಸರಿಪಡಿಸುವ ಕಾರ್ಯ ನಡೆಯಲಿದೆ. 2025 ರ ಜನವರಿ 01 ರಂದು ಅಂತಿಮ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ನಡೆದು. 2025 ಜನವರಿ 06 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 29 at 8.48.50 PM

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 02 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳು ಸೇರಿದಂತೆ ಒಟ್ಟು 6 ಮತಗಟ್ಟೆಗಳು ಹೆಚ್ಚಳವಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಗದ್ದೆಹಳ್ಳ, ಗುಮ್ಮನಕೊಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಡಗ ಬಾನಂಗಾಲ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲಪ್ಪ ಮೆಮೋರಿಯಲ್ ಬಳಿಯ ಶಿಶು ವಿಹಾರ ಕೇಂದ್ರ, ಗೋಣಿಕೊಪ್ಪ ರಸ್ತೆ ಹಾಗೂ ಪಂಜರಪೇಟೆಯ ಉರ್ದುಶಾಲೆ ಇಲ್ಲಿ ಹೊಸ ಮತಗಟ್ಟೆಗಳು ಸ್ಥಾಪನೆ ಆಗಿದೆ ಎಂದು ತಿಳಿಸಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ, ತಾಲ್ಲೂಕು ಕಚೇರಿಗಳಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ಅಕ್ಟೋಬರ್ 29 ರಂದು ಪ್ರಕಟಣೆ ಮಾಡಲಾಗಿದ್ದು, ಸಾರ್ವಜನಿಕರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು.

2024 ರ ಅಕ್ಟೋಬರ್ 29 ರಂದು ಪ್ರಕಟಣೆ ಮಾಡಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 552 ಮತಗಟ್ಟೆಗಳಲ್ಲಿ 4,74,097 ಮತದಾರರು ಇದ್ದಾರೆ. ಇದರಲ್ಲಿ 2,32,041 ಪುರುಷರು, 2,42,041 ಮಹಿಳಾ ಮತದಾರರು ಹಾಗೂ 15 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 275 ಮತಗಟ್ಟೆಯಲ್ಲಿ 2,40,247 ಮತದಾರರು ಇದ್ದು, ಇದರಲ್ಲಿ 1,16,787 ಪುರುಷ ಮತದಾರರು, 1,23,452 ಮಹಿಳಾ ಮತದಾರರು ಮತ್ತು 8 ಇತರ ಮತದಾರರು ಇದ್ದಾರೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 277 ಮತಗಟ್ಟೆಗಳಿದ್ದು, 2,33,850 ಮತದಾರರು ಇದ್ದಾರೆ. ಇದರಲ್ಲಿ 1,15,254 ಪುರುಷ ಮತದಾರರು, 1,18,589 ಮಹಿಳಾ ಮತದಾರರು, 7 ಮಂದಿ ಇತರೆ ಮತದಾರರು ಇದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಮಿಕರ ಉಪಯೋಗಕ್ಕೆ ನೀಡುವಂತೆ ಎಸ್‌ಎಫ್‌ಐ ಮನವಿ

ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಅನಿವಾಸಿ ಭಾರತೀಯ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್, ಮತದಾರರ ಸಹಾಯವಾಣಿ ಆ ಮೂಲಕ ಅನ್‍ಲೈನ್‍ನಲ್ಲಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ತೆನ್ನಿರಾ ಮೈನಾ, ಬಿಜೆಪಿ ಪಕ್ಷದ ಸಜಿಲ್ ಕೃಷ್ಣ,ಬಿಎಸ್ಪಿ ಕವಿತಾ, ಚುನಾವಣಾ ಶಿರಸ್ತೇದಾರ್ ಕೆ ಜಿ ಮಧುಕರ, ಅನಿಲ್ ಕುಮಾರ್ ಮುಂತಾದವರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...