ಕೊಡಗು | ಕಾಡಾನೆ ದಾಳಿ; ಮಹಿಳೆ ಬಲಿ

Date:

ಆನೆ-ಮಾನವ ಸಂಘರ್ಷ ಮಂದುವರಿದಿದ್ದು, ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.

ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

“ಕಳೆದ ಒಂದು ವಾರದ ಹಿಂದೆಯೂ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಇದೀಗ ಮತ್ತೆ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ‌. ಕೂಡಲೇ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸ್ಥಳೀಯುರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಕಾಡಾನೆಗಳ ತಂಡ ಕಾಫಿ ತೋಟಗಳನ್ನೇ ಬಿಡಾರ ಮಾಡಿಕೊಂಡಿವೆ. ಕಾಫಿ ತೋಟಗಳಲ್ಲಿ ಬೇಕಾದಷ್ಟು ಆಹಾರ ಹಾಗೂ ನೀರು ಇವುಗಳಿಗೆ ಸಿಗುತ್ತಿರುವುದರಿಂದ ಇವು ಕಾಡಿಗೆ ಮರಳುತ್ತಿಲ್ಲ. ಎಷ್ಟೇ ಪಟಾಕಿ ಸಿಡಿಸಿ ಗದ್ದಲ ಎಬ್ಬಿಸಿದರೂ ಹೋಗುತ್ತಿಲ್ಲ. ಇವುಗಳಿಂದಾಗಿ ಕಾಫಿ ತೋಟಗಳಿಗೆ ಹೋಗಲು ಹೆದರಿಕೆಯಾಗುತ್ತಿದೆ. ಕೂಲಿ ಮಾಡಲು ಜನ ಸಿಗುತ್ತಿಲ್ಲ” ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.

ಹಾಸನ ಜಿಲ್ಲೆಯಲ್ಲಿಯೂ ಆನೆ ದಾಳಿ ಮುಂದುವರಿದಿದ್ದು, ಕಾಡಾನೆಗಳ ಹಿಂಡಿನ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲೂಕಿನ ದೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಸುಸದ್ದಿ ಓದಿದ್ದೀರಾ? ರಾಮನಗರ | ಮಕ್ಕಳಿಗೆ ಗೂಡ್ಸ್‌ ವಾಹನ ಢಿಕ್ಕಿ ಪ್ರಕರಣ; ರಸ್ತೆ ಮಧ್ಯೆ ಬಾಲಕಿ ಶವವಿಟ್ಟು ಪ್ರತಿಭಟನೆ

ದಾಳಿ ಮಾಡಿರುವ ಆನೆಹಿಂಡು ಕಾಫಿ, ಶುಂಠಿ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ನೀರಿನ ಪೈಪ್‌ಗಳನ್ನು ಕಿತ್ತು ಪುಂಡಾನೆಗಳು ಅಟ್ಟಹಾಸ ಮೆರೆದಿವೆ. ಅಪ್ಸರ್ ಎಂಬವರ ಕಾಫಿ ತೋಟದಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಾಫಿ ತೋಟದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಷ್ಟಪಟ್ಟು ಬೆಳೆದಿದ್ದ ಅಡಿಕೆ ಗಿಡಗಳನ್ನು ಕಾಡಾನೆಗಳು ನೆಲಸಮ ಮಾಡಿವೆ. ಈ ಹಿನ್ನೆಲೆಯಲ್ಲಿ ತೋಟದ ಮಾಲೀಕ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...