ಕೊಡಗು | ನಾಮಫಲಕ ತೆರವಿನ ವಿರುದ್ಧ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ; ಅನುದಾನ ನೀಡದಂತೆ ಜಿಲ್ಲಾಧಿಕಾರಿಗೆ ಮನವಿ

Date:

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾಭವನದಲ್ಲಿ ಅಳವಡಿಸಲಾಗಿದ್ದ ಸಂಘದ ನಾಮಫಲಕವನ್ನು ಪತ್ರಿಕಾಭವನ ಟ್ರಸ್ಟ್‌ನವರು ತೆರವು ಮಾಡಿದ ಘಟನೆ ನಡೆದಿದ್ದು, ಇದರ ವಿರುದ್ಧ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿ ಅನುದಾನ ನೀಡುವುದನ್ನು ತಡೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘದ ಕಚೇರಿಯ ಕೀಲಿಕೈಯನ್ನು ಪತ್ರಿಕಾಭವನದ ಟ್ರಸ್ಟಿ ಅಕ್ರಮವಾಗಿ ತೆಗೆದುಕೊಂಡು ಹೋಗಿದ್ದಾರೆ. ಕಚೇರಿಯನ್ನು ತೆರವು ಮಾಡುವಂತೆ ಈ ಹಿಂದೆ ಸಂಘಕ್ಕೆ ನೋಟಿಸ್ ನೀಡಿದ್ದರು. ಇದರ ವಿರುದ್ದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸೇರಿ ಪತ್ರಿಕಾಭವನದಲ್ಲಿ ನೂತನ ನಾಮಪಲಕವನ್ನು ಅಳವಡಿಸಿ ಬಳಿಕ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ್ದರು. ಬಳಿಕ‌ ಮಂಗಳವಾರ ಸಂಜೆ ಪತ್ರಿಕಾಭವನಕ್ಕೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರ ಬೆಳಿಗ್ಗೆ ಸಂಘ ಹಾಗೂ ಟ್ರಸ್ಟ್‌ನವರನ್ನು ಪೊಲೀಸ್ ಠಾಣೆಗೆ ಕರೆದು ಡಿವೈಎಸ್‌ಪಿ ಸೂರಜ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಅಕ್ರಮವಾಗಿ ನಾಮಫಲಕ ತೆರವು ಹಾಗೂ ಕಚೇರಿ ಕೀಲಿಕೈ ನೀಡದೆ ಸತಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಕೂಡಲೇ ಯಥಾಸ್ಥಿತಿಯಂತೆ ಕಚೇರಿಯನ್ನು ತೆರೆದು ಸಂಘದ ಕಾರ್ಯಕ್ರಮಕ್ಕೆ ಅನುವು ಮಾಡಿಕೊಡುವಂತೆ ಸೂಚನೆ ನೀಡಲಾಗಿದೆ. ಅದರಂತೆ ಇಂದು ಸಂಘದ ಕಚೇರಿಯ ಕೀಲಿ ಕೈ ನೀಡಿದ್ದಾರೆ. ಇನ್ನುಮುಂದೆ ಕೀಲಿಕೈ ಸಂಘದ ಸುಪರ್ದಿಯಲ್ಲಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಭವನ ಟ್ರಸ್ಟ್‌ನವರ ಈ ವರ್ತನೆಯನ್ನು ಖಂಡಿಸಿ ಇಂದು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಲಾಗಿದೆ. ಕಟ್ಟಡದಲ್ಲಿ ‌ಯಾವುದೇ ಕಾರಣಕ್ಕೂ ಮೇಲಂತಸ್ತು ಕಟ್ಟಲು ಅವಕಾಶ ನೀಡಬಾರದು. ಜತೆಗೆ ಸರ್ಕಾರ ಸಂಘದ ಕಟ್ಟಡಕ್ಕೆ ನೀಡಿರುವ ₹12.50 ಲಕ್ಷ ಅನುದಾನವನ್ನು ನೀಡಬಾರದೆಂದು ದೂರು ನೀಡಲಾಗಿದೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಮುಂದಿನ ಹೋರಾಟವನ್ನು ಆರಂಭಿಸಿದೆ.

ಈ ಸುದ್ದಿ ಓದಿದ್ದೀರಾ? ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ

ಈ ಸಂದರ್ಭ ಸಂಘದ ಅಧ್ಯಕ್ಷ ಬಿ ಆರ್ ಸವಿತಾರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ, ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಮಿತಿ ನಿರ್ದೇಶಕ ಮಂಜುನಾಥ್, ರಾಷ್ಟ್ರೀಯ ಸಮಿತಿ ಸದಸ್ಯ ಸುನಿಲ್ ಪೊನ್ನಟ್ಟಿ, ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ತಾಲೂಕು ಸಂಘಗಳ ಅಧ್ಯಕ್ಷರು, ಸಂಘದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...