ಕೊಡಗು | ಮಾಜಿ ಶಾಸಕರ ಆರೋಪಕ್ಕೆ ಕಾಂಗ್ರೆಸ್‌ ಮುಖಂಡ ಧರ್ಮಜ ಉತ್ತಪ್ಪ ತಿರುಗೇಟು

Date:

ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತನಾಡಲಿ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಅವರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿರುಗೇಟು ನೀಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್ ಪರಿಹಾರ ನಿಧಿಯಡಿ ತಯಾರಿಸಲಾಗಿದ್ದ ಕಾಮಗಾರಿಗಳ ಕ್ರಿಯಾಯೋಜನೆ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಿಯಾಯೋಜನೆ ಬದಲಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭ 50ಕೋಟಿ ರೂ.ಗಳ ವಿಶೇಷ ಪ್ಯಾಕೇಜನ್ನು ತರಲಾಗಿತ್ತು. ಈ ಸಂದರ್ಭ ಮಾಜಿ ಶಾಸಕರುಗಳು ಎಲ್ಲಾ ಕಾಮಗಾರಿಗಳನ್ನು ಬದಲಿಸಿದ್ದರು. 2019ರಿಂದ 2021ರವರೆಗೆ ಮೂರು ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಗಮಂಡಲದಲ್ಲಿ ಕಾಣಿಸಿಕೊಳ್ಳುವ ಪ್ರವಾಹವನ್ನು ತಪ್ಪಿಸುವ ಚಿಂತನೆಯಡಿ ಆರಂಭಿಸಿದ ಕಾವೇರಿಯ ಹೂಳೆತ್ತುವ ಕಾಮಗಾರಿಯ ಟೆಂಡರ್ ಪಡೆದವರ ಮೇಲೆ ಒತ್ರಡ ಹಾಕಿ ಟೆಂಡರ್ ಅನ್ನು ರದ್ದುಗೊಳಿಸಿದ್ದು ಯಾರೆಂದು ಮಾಜಿ ಶಾಸಕರೇ ಉತ್ತರಿಸಬೇಕು ಎಂದು ಹೇಳಿದ ಧರ್ಮಜ ಉತ್ತಪ್ಪ, ಕಾಮಗಾರಿಯ ಮರುಟೆಂಡರ್ ಆಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಹಾರಂಗಿ ಅಣೆಕಟ್ಟು ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪಡೆದವರಿಗೆ ಈಗಾಗಲೇ ಸೂಚನೆ ನೀಡಿದ್ದು, ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದಾರೆ. 2012ರಲ್ಲಿ ಆರಂಭಗೊಂಡ ಸೋಮವಾರಪೇಟೆಯ ಟರ್ಫ್ ಹಾಕಿ ಮೈದಾನದ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇದೀಗ ಶಾಸಕ ಡಾ.ಮಂತರ ಗೌಡ ಅವರ ಪ್ರಯತ್ನದಿಂದಾಗಿ 40 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಂಡಿದೆ. ಕಳೆದ 7-8 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಟ್ಟಡ ಕಾಮಗಾರಿ, ಕುಶಾಲನಗರ ಬಸ್ ನಿಲ್ದಾಣದ ಕಟ್ಟಡ ಹೀಗೆ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ಶೀಘ್ರದಲ್ಲೇ ಆರಂಭಗೊಳ್ಳಲಿವೆ. ಲೋಕಸಭಾ ಚುನಾವಣೆ ಹತ್ತಿರ ಬಂದಾಗ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಶಾಸಕಧ್ವಯರು ಕಳೆದ ಇಪ್ಪತ್ತು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಧರ್ಮಜ ಉತ್ತಪ್ಪ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್, ವಕ್ತಾರ ಟಾಟು ಮೊಣ್ಣಪ್ಪ, ಉಪಾಧ್ಯಕ್ಷ ಅರವಿಂದ್ ಕುಟ್ಟಪ್ಪ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ.ಎನ್.ಪ್ರಥ್ಯು ಹಾಗೂ ಪ್ರಮುಖರಾದ ನರೇಂದ್ರ ಕಾಮತ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...