ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪದ ಮೇಲೆ ಪ್ರತ್ಯೇಕ ಪ್ರಕರಣಗಳಲ್ಲಿ ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಪೋಕ್ಲು ಪೋಲಿಸ್ ಠಾಣೆ ವ್ಯಾಪ್ತಿಯ ನರಿಯಂಡ ಗ್ರಾಮದ ಪ್ರೌಢ ಶಾಲೆಯ ಬಳಿ ಇಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಲ್ಲಿ ದಾಳಿ ನಡೆಸಿದ ಪೊಲೀಸರು ಸುಮಾರು 180 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ
ಮತ್ತೊಂದು ಪ್ರಕರಣದಲ್ಲಿ, ಕುಶಾಲನಗರ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದು, ಏಳು ಮಂದಿಯನ್ನು ಬಂಧಿಸಿದ್ದಾರೆ ಮತ್ತು ಅವರಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.




