ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಚಿನ್ನಾಭರಣ, ಅಪಾರ ಪ್ರಮಾಣದ ನಗದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಇದೇ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡರ ಮಾವನ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದು, ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.




