ಕೊಡಗು | ಜೇನು ಕೃಷಿಕರ ಸಂಘದ ಚುನಾವಣೆ; ಮತದಾನ ವಂಚಿತರಿಗೆ ಮತದಾನಕ್ಕೆ ಅವಕಾಶ

Date:

ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು. ಇದೀಗ ಅವರೆಲ್ಲರಿಗೂ ಮತದಾನಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್‌ ಆದೇಶ ನೀಡಿದೆ ಎಂದು ಸಂಘದ ಸದಸ್ಯರು ಹೇಳಿದ್ದಾರೆ.

ಮತಪಟ್ಟಿಯಿಂದ ಸದಸ್ಯರನ್ನು ಕೈಬಿಡಲಾಗಿದ್ದ ಬಗ್ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕರ ಎ.ಎಸ್‌ ಪೊನ್ನಣ್ಣ ಅವರ ಗಮನಕ್ಕೆ ತರಲಾಗಿತ್ತು. ಅವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರ ಗಮನಕ್ಕೆ ತಂದ ಮೇರೆಗೆ ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು. “ಭಾಗಮಂಡಲದ ಕೊಡಗು ಪ್ರಗತಿಪರ ಜೇನು ಕೃಷಿಕರ ಸಂಘದ ಸದಸ್ಯರ ಮತದಾನದ ಹಕ್ಕು ಕಸಿದುಕೊಳ್ಳಲಾಗಿದೆ. ಆ ಮೂಲಕ ಆಡಳಿತ ಮಂಡಳಿಯು ಕಾನೂನನನ್ಉ ಉಲ್ಲಂಘಿಸಿದೆ” ಎಂದು ಕೋರ್ಟ್‌ನಲ್ಲಿ ವಕೀಲೆ ಲೀಲಾ ದೇವಾಡಿಗ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಆಲಿಸಿದ ನ್ಯಾಯಾಲಯ, “ಎಲ್ಲ ಸದಸ್ಯರಿಗೂ ಮತಧಾನಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದೆ. ಸಂಘದ ನಿಭಂದಕರು, ಉಪ ನಿಭಂದಕರು ಹಾಗೂ ಸಂಭಂದಪಟ್ಟ ಅಧಿಕಾರಿಗಳು ಆದೇಶವನ್ನು ತಕ್ಷಣವೇ ಪಾಲಿಸುವಂತೆ ಸೂಚನೆಯನ್ನು ನೀಡಿದೆ ಎಂದು ವಿವರಿಸಿದೆ.

“ಹೈಕೋರ್ಟ್‌ ಆದೇಶವು ಕೊಡಗಿನ ಅನೇಕ ಸಹಕಾರ ಸಂಘಗಳು ರಾಜಕೀಯ ದುರುದ್ದೇಶದಿಂದ ಮತದಾನದ ಹಕ್ಕು ಕಸಿಯುವ ಪ್ರವೃತ್ತಿಗೆ ಕಡಿವಾಣ ಹಾಕಿದೆ” ಎಂದು ಸಂಘದ ಸದಸ್ಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...