ಕೊಡಗು | ಸದ್ಯದಲ್ಲೇ ಕಂದಾಯ ನಿಗದಿ ಸಮಸ್ಯೆಗೆ ಮುಕ್ತಿ; ಜಿಲ್ಲಾಡಳಿತದಿಂದ ದಿಟ್ಟ ಹೆಜ್ಜೆ

Date:

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ನಿಗದಿ ಆಗದೇ ಇರುವ ಎಲ್ಲ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಕುರಿತು ಪ್ರಾಯೋಗಿಕವಾಗಿ ಗ್ರಾಮವಾರು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಕೊಡಗಿನಲ್ಲಿ ಎಲ್ಲ ಬಾಣೆ ಜಾಗಗಳಿಗೆ ಕಂದಾಯ ನಿಗದಿಯಾಗದೆ ಜಿಲ್ಲೆಯ ಜನತೆ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಜನತೆಯ ಕೂಗಿಗೆ ಸ್ಪಂದಿಸಿದ ಸರ್ಕಾರ ಹಾಗೂ ಜಿಲ್ಲಾಡಳಿತ ತಾಲೂಕು ವ್ಯಾಪ್ತಿಯಲ್ಲಿ ಒಂದೊಂದು ಗ್ರಾಮವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡು ಸದರಿ ಗ್ರಾಮದಲ್ಲಿ ಎಲ್ಲ ಬಾಣೆ ಜಮೀನುಗಳನ್ನು ಕಂದಾಯ ನಿಗದಿಪಡಿಸಲು ತೀರ್ಮಾನಿಸಿ ಜಂಟಿ ಸಮೀಕ್ಷೆ ನಡೆಸಿ ಕ್ರಮ ವಹಿಸಲು ಅಧಿಕಾರಿಗಳನ್ನು ನೇಮಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈಗಾಗಲೇ ಕಾರ್ಯೋನ್ಮುಖರಾಗಿರುವ ಅಧಿಕಾರಿಗಳು ಸಂಪೂರ್ಣವಾಗಿ ಕಂದಾಯಕ್ಕೆ ಒಳಪಡದ ಜಮೀನುಗಳನ್ನು ಗುರುತಿಸಿ ಅಳತೆ ಮಾಡಿ, ಕಂದಾಯ ನಿಗದಿಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಪ್ರಾಯೋಗಿಕವಾಗಿ ಗುರುತಿಸಲಾದ ಗ್ರಾಮಗಳ ನಿವಾಸಿಗಳು ಕಂದಾಯಕ್ಕೆ ಒಳಪಡದ ಜಮೀನುಗಳನ್ನು ಗುರುತಿಸಿ ಸರ್ವೆ ಕಾರ್ಯಕ್ಕೆ ಬರುವ ಅಧಿಕಾರಿಗಳಿಗೆ ಸ್ಥಳವನ್ನು ತೋರಿಸುವ ಕೆಲಸ ಮಾಡಬೇಕಾಗಿದೆ. ಸದ್ಯದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಇದು ವಿಸ್ತಾರಗೊಂಡು ಮೊದಲ ಹಂತದಲ್ಲಿ ಕಂದಾಯ ನಿಗದಿಗೊಳಿಸುವ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ಜನತೆಯ ಬಹು ಬೇಡಿಕೆಯನ್ನು ಸರ್ಕಾರ ಇದೀಗ ಸ್ಪಂದಿಸಿ ಜನೋಪಯೋಗಿ ಕಾರ್ಯಕ್ಕೆ ಮುಂದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯಕ್ಕೆ ಒಳಪಡದ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಿಸಿದ ಸರ್ವೆ ನಂಬರ್‌ನ ಹಕ್ಕುದಾರರಿಗೆ ಜಮೀನುಗಳ ಹಕ್ಕು ವರ್ಗಾವಣೆ, ಭೂ ಪರಿವರ್ತನೆ, ಸಿವಿಲ್ ನ್ಯಾಯಾಲಯಗಳಲ್ಲಿ ವ್ಯಾಜ್ಯ ದಾಖಲಿಸುವುದು ಇತ್ಯಾದಿ ಭೂ ಸಂಬಂಧಿತ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಕರಣಗಳು ತಾಲೂಕು ಕಚೇರಿ ಮತ್ತು ಭೂಮಾಪನ ಕಚೇರಿಗಳಲ್ಲಿ ಬಾಕಿ ಉಳಿದುಕೊಂಡಿದ್ದು, ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮತ್ತು ಕಂದಾಯ ನಿಗದಿ ಪ್ರಕರಣಗಳಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸುವ ದೃಷ್ಟಿಯಿಂದ ಇಂಥ ಪ್ರಕರಣಗಳನ್ನು ಗ್ರಾಮವಾರು ಆಂದೋಲನದ ಮೂಲಕ ಕ್ರಮ ಜರುಗಿಸಿ ವಿಲೇವಾರಿ ಮಾಡುವ ಅವಶ್ಯಕತೆ ಕಂಡು ಬಂದಿದ್ದರಿಂದ ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕವಿವಿ ಶುಲ್ಕ ಹೆಚ್ಚಳ, ವಿದ್ಯಾರ್ಥಿವೇತನ ವಿಳಂಬಕ್ಕೆ ಎಐಆರ್‌ಎಸ್‌ಒ ವಿರೋಧ

“ಮಡಿಕೇರಿ ತಾಲೂಕಿನ ಭಾಗಮಂಡಲದ ಬೇಗೂರು ಗ್ರಾಮ, ಸೋಮವಾರಪೇಟೆ ತಾಲೂಕಿನ ಕಿರುಗುಂದೂರು ಗ್ರಾಮ, ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ನಕೂರು ಶಿರಂಗಾಲ ಗ್ರಾಮ, ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ, ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮಗಳಲ್ಲಿ ಮೊದಲ ಹಂತದ ಪ್ರಾಯೋಗಿಕ ಸಮೀಕ್ಷೆ ನಡೆಸಿ ಕಂದಾಯ ನಿಗದಿಗೊಳಿಸಲಾಗುವುದು” ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...