ಕೊಡಗು | ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿವಿಗೆ ಆಗ್ರಹ

Date:

ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್‌ 12ರಂದು ಆಯೋಜಿಸಿರುವ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟದ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಲೇಜಿನ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಅವರು ಅತೀವ ಕಳವಳ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷೆ ಡಾ ಪಾರ್ವತಿ ಅಪ್ಪಯ್ಯ ಮಾತನಾಡಿ, “ನಾವು ಓದಿದ ಕಾಲೇಜು ನಮ್ಮ ಕಣ್ಣು ಮುಂದೆಯೇ ಕೆಳಗಿಳಿಯುತ್ತಿರುವುದನ್ನು ನೋಡಿ ಸಹಿಸಲಾಗುತ್ತಿಲ್ಲ. ಕಾಲೇಜಿಗೆಂದು ನೇಮಕಗೊಂಡ ಅಧ್ಯಾಪಕರು ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇದ್ದಾರೆ. ಅವರ ಬದಲಿಗೆ ವಿಶ್ವವಿದ್ಯಾಲಯವು ಅಧ್ಯಾಪಕರನ್ನು ನಿಯೋಜಿಸುತ್ತಿಲ್ಲ. ಇದರಿಂದ ಇಂದು ಕಾಲೇಜಿನಲ್ಲಿ ಕೇವಲ 23 ಮಂದಿಯಷ್ಟೇ ಖಾಯಂ ಉಪನ್ಯಾಸಕರಿದ್ದಾರೆ. ಪರಿಸರ ವಿಜ್ಞಾನಕ್ಕೆ ಒಬ್ಬರೂ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಕೊಡಗನ್ನು ಪ್ರತಿನಿಧಿಸುವವರೇ ಈಗ ಇಲ್ಲ. ಇದರಿಂದ ಇಲ್ಲಿನ ಸಮಸ್ಯೆಗಳು ಅಲ್ಲಿನವರಿಗೆ ಅರ್ಥವಾಗುತ್ತಿಲ್ಲ. ವಿದ್ಯಾರ್ಥಿಗಳಿಂದ ಶುಲ್ಕ ಪಡೆದುಕೊಳ್ಳುವ ವಿಶ್ವವಿದ್ಯಾಲಯ ಅವರಿಗೆ ಪಾಠ ಹೇಳಲು ಉಪನ್ಯಾಸಕರನ್ನು ನೇಮಿಸುತ್ತಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಗದಗ | ತರಗತಿ ಬಹಿಷ್ಕರಿಸಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರತಿಭಟನೆ

ಸಂಘದ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ ಮಾತನಾಡಿ, “ಕಾಲೇಜಿನಲ್ಲಿ ಅಧ್ಯಾಪಕರ ಕೊರತೆ ಮಾತ್ರವಲ್ಲ, ಮೂಲ ಸೌಕರ್ಯದ ಕೊರತೆಯೂ ಇದೆ. ಕಾಲೇಜಿನ ನಿರ್ವಹಣೆ ಹಣ ಇಲ್ಲದಾಗಿ  ಆವರಣದಲ್ಲಿ ಗಿಡಗಳೆಲ್ಲ ಬೆಳೆದಿವೆ” ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಎನ್ ಡಿ ಚರ್ಮಣ, ನಿರ್ದೇಶಕರುಗಳಾದ ನಂದಿನೆರವಂಡ ಅಪ್ಪಯ್ಯ, ರಾಣಿ ಮಾಚಯ್ಯ, ಬಿ ಕೆ ಪೂಣಚ್ಚ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...