ಕೊಡಗು | ದೇಶದಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ: ಸಚಿವ ಬೋಸರಾಜು

Date:

ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಹುಬ್ಬಳ್ಳಿಯಲ್ಲಿ ತೀರಾ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುತ್ತಿದೆಯೇ ಹೊರತು ರಾಮಭಕ್ತರನ್ನು ಗುರಿಯಾಗಿಸಿ ಕ್ರಮ ಕೈಗೊಂಡಿಲ್ಲ” ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

“ಜಾರಿ ನಿರ್ದೇಶನಾಲಯ ಸೇರಿದಂತೆ ಸರ್ಕಾರಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿರುವುದು ಯಾರೆಂಬುದು ಎಲ್ಲರಿಗೂ‌ ಗೊತ್ತಿದೆ. ಕಾಂಗ್ರೆಸ್ ಈವರೆಗೂ ಈ ಪರಿಯ ದ್ವೇಷದ ರಾಜಕಾರಣ ಮಾಡಿಲ್ಲ. ವಿರೋಧ ಪಕ್ಷದ ನಾಯಕರಿಗೆ ಗೌರವ ಕೊಟ್ಟಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ ಕುರಿತು ಬಿಜೆಪಿಯ ಒಬ್ಬರೂ ಮಾತನಾಡುವುದಿಲ್ಲ. ಆದರೆ ಜನರ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ಮಾತ್ರ ಅವರು ನೀಡುತ್ತಿದ್ದಾರೆ” ಎಂದು ಹರಿಹಾಯ್ದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಮಾತನಾಡಿ, “ನಾವು ರಾಮಮಂದಿರದ ಪರವಾಗಿದ್ದೇವೆ. ಮುಖ್ಯಮಂತ್ರಿ ಅವರೂ ಇದನ್ನೇ ಹೇಳಿದ್ದಾರೆ. ನಾನೂ ಇದನ್ನೇ ಹೇಳುತ್ತಿದ್ದೇನೆ. ರಾಮಮಂದಿರ ಉದ್ಘಾಟನೆಗೆ ಶುಭವಾಗಲಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದ.ಕ | ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ: ಶಾಸಕ ವೇದವ್ಯಾಸ್ ಕಾಮತ್

“ಬಿಜೆಪಿಯವರು ರಾಜಕೀಯಕ್ಕಾಗಿ ಸಹಜವಾಗಿ ಆರೋಪ ಮಾಡುತ್ತಾರೆ. ಕಾನೂನು ಬೇರೆ, ರಾಜಕೀಯ ಬೇರೆ. ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಲಿಲ್ಲ, ಯಾವುದೇ ರೀತಿ ಅಪರಾಧ ಪರಾಮರ್ಶೆ ನಡೆದಿರಲಿಲ್ಲ” ಎಂದರು.

“ಈಗ 31 ವರ್ಷಗಳಿಂದ ಇದ್ದ ಪ್ರಕರಣಗಳಿಗೆ ಅಂತ್ಯವಾಡಲು ಕ್ರಮ ಕೈಗೊಳ್ಳಬೇಕಿದೆ‌. ಕರವೇ ಸೇವಕರನ್ನು ಬಂಧಿಸಬೇಕು ಅಂತ ಯಾರೂ ಬಂಧಿಸಿಲ್ಲ. ಕಾನೂನು ಪ್ರಕ್ರಿಯೆಗಳಿಗೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...