ಕೊಡಗು | ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ವೃದ್ಧೆಗೆ ಹಲ್ಲೆ, ದರೋಡೆ; ಆರೋಪಿ ಬಂಧನ

Date:

ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ ಇ ಸಾಕಮ್ಮ ಪ್ರಭಾಕರ ಎಂಬುವವರ ಮೇಲೆ ಭಾನುವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಯ ಹಿಂಭಾಗದಿಂದ ಅಕ್ರಮವಾಗಿ ಒಳಗೆ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದೋಚಿದ್ದ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದ ಬಳಿಕ ಎಸ್‌ಪಿ ಕೆ. ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಕೆ ಎಸ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರು. ಆದರೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲ ಹೊಟೇಲ್, ಹೋಂಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.

ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡು, ನಗರದ ಅಂಚಿನ ಇಬ್ಬನಿ ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಧಿಕಾರಿ ಪ್ರತಿಮಾ ಹತ್ಯೆ | ನ.15 ರವರೆಗೆ ಆರೋಪಿ ಕಿರಣ್ ಪೊಲೀಸ್‌ ಕಸ್ಟಡಿಗೆ

ಪ್ರಕರಣ ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

“ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಇಲ್ಲವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ” ಎಂದು ಎಸ್‌ಪಿ ಕೆ ರಾಮರಾಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...