ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌; ಚಿನ್ನ ಗೆದ್ದ ಭಾರತದ ಶಾಹಿಲ್ ಉಸ್ಮಾನ್ ಮತ್ತು ಇರ್ಷಾದ್ ಮುಸ್ತಫಾ

Date:

ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ‌

ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ದ ಸೆಸ್ಟೋ ಬಾಲ್‌ನಲ್ಲಿನ ತಮ್ಮ ಚಾಕಾಚಕ್ಯತೆಯನ್ನು ಪ್ರದರ್ಶಿಸಿ ದೇಶಕ್ಕೆ ಚಿನ್ನದ ಪದಕ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ, ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಕೆ.ಎ ಉಸ್ಮಾನ್ ಅವರ ಪುತ್ರ ಶಾಹಿಲ್ ಉಸ್ಮಾನ್ ಅವರು ಭಾರತ ತಂಡದ ಕ್ಯಾಪ್ಟನ್ ಆಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಂಟಿಕೊಪ್ಪದ ಜಾವಮನೆ ಮುಸ್ತಫಾರವರ ಪುತ್ರ ಇರ್ಷಾದ್ ಮುಸ್ತಫಾ ಅವರು ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್‌ನಲ್ಲಿ ಬೆಸ್ಟ್ ಪ್ಲೇಯರ್ ಆಫ್ ದಿ ಟೂರ್ನಿಮೆಂಟ್‌ಗೆ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

ಕೊಪ್ಪ ಗೇಟ್‌ನಲ್ಲಿ ಸ್ವಾಗತ ಈ ಟೂರ್ನಿಮೆಂಟ್‌ನಲ್ಲಿ ದೇಶಕ್ಕೆ ಬಂಗಾರದ ಪದಕಗಳನ್ನು ತಂದುಕೊಟ್ಟು ಕೊಡಗು ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿರುವ ಶಾಹೀಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ನವೆಂಬರ್‌ 15ರಂದು ನವದೆಹಲಿಗೆ ಹಿಂತಿರುಗಿ ಬೆಂಗಳೂರು ಮೂಲಕ ಕೊಡಗಿನ ಹೆಬ್ಬಾಗಿಲು ಕೊಪ್ಪ ಗೇಟ್‌ಗೆ ಅಪರಾಹ್ನ 4.30ಕ್ಕೆ ತಲುಪಲಿದ್ದಾರೆ. ಅಲ್ಲಿಂದ ಸುಂಟಿಕೊಪ್ಪಕ್ಕೆ ಬೀಳ್ಕೊಡಲಾಗುವುದು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಕ್ರೀಡಾಭಿಮಾನಿಗಳು ಪಾಲ್ಗೊಳ್ಳುವಂತೆ ಮಡಿಕೇರಿ ತಾಲೂಕು ಅಧ್ಯಕ್ಷ ಅಶೋಕ್ ಆಳ್ವ,
ಕೋಶಾಧಿಕಾರಿ ಕಬೀರ್ ಅಹಮದ್ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...