ಕೊಡಗು | ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ: ಶಾಸಕ ಎ.ಎಸ್ ಪೊನ್ನಣ್ಣ

Date:

ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಆದರೆ, ಅವರ ಶ್ರೇಯೋಭಿವೃದ್ಧಿಗೆ ಚಿಂತನೆ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಜವಾಬ್ದಾರಿ ಹಾಗೂ ಒತ್ತಡವಿದೆ ಎಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.

ಕೊಡಗು ಜಿಲ್ಲಯ ಮಡಿಕೇರಿಯಲ್ಲಿ ನಡೆದ ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಿಂದೆ ಮಾಧ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯ ಅಡಗಿದೆ. ಪತ್ರಿಕಾ ಸ್ವಾತಂತ್ರ್ಯದಿಂದ ಆಡಳಿತದಲ್ಲಾಗುವ ಲೋಪದೋಷಗಳನ್ನು ಪತ್ತೆ ಮಾಡಿ ಸರಿದಾರಿಗೆ ಕೊಂಡೊಯ್ಯುವ ಕೆಲಸವನ್ನು ಪತ್ರಕರ್ತರು ಮಾಡುತ್ತಿರುವುದು ಶ್ಲಾಘನೀಯ” ಎಂದರು.

“ರಾಜಕಾರಣಿಗಳು ಹಾಗೂ ಪತ್ರಕರ್ತರು ಒತ್ತಡದಲ್ಲಿ ಕೆಲಸ ಮಾಡುತ್ತ ವೈಯಕ್ತಿಕ ಜೀವನ ಕಳೆದುಕೊಳ್ಳುತ್ತಿದ್ದೇವೆ. ಹಲವು ಪತ್ರಕರ್ತರು ಇಂದಿಗೂ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾ ಪತ್ರಕರ್ತರು ಹಲವು ವರ್ಷಗಳಿಂದ ನಿವೇಶನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಆದರೆ, ಜಾಗದ ಕೊರತೆ, ಆಡಳಿತಾತ್ಮಕ ಸಮಸ್ಯೆಯಿಂದ ಇದು ಸಾಧ್ಯವಾಗುತ್ತಿಲ್ಲ. ಪತ್ರಕರ್ತರ ಸಹಕಾರಿ ಸಂಘದ ಮೂಲಕ ಖಾಸಗಿ ಅಥವಾ ಸರ್ಕಾರಿ ಜಾಗವನ್ನು ಖರೀದಿಗೆ ಮುಂದಾಗಬೇಕೆಂದು ಸಲಹೆ ನೀಡಿದರು. ಇದಕ್ಕೆ ಅಗತ್ಯ ಸಹಕಾರ ನೀಡುತ್ತೇನೆ” ಎಂದು ಶಾಸಕರು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಬೆಳ್ಳಿ ಹಬ್ಬ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಪೂವಯ್ಯ, ಗೌರವಧ್ಯಕ್ಷೆ ಬಿ.ಆರ್ ಸವಿತಾ ರೈ, ಪ್ರಜ್ಞಾ ರಾಜೇಂದ್ರ, ಆನಂದ್ ಕೊಡಗು, ಪ್ರತಿಮಾ ಹರೀಶ್ ರೈ, ಕೆ.ಕೆ ರೆಜಿತ್ ಕುಮಾರ್, ಬಾಚರಣಿಯಂಡ ಅನು ಕಾರ್ಯಪ್ಪ, ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಎಚ್.ಟಿ. ಅನಿಲ್, ಡಾ. ಉಳ್ಳಿಯಡ ಪೂವಯ್ಯ, ಹಿರಿಯ ಪತ್ರಕರ್ತರಾದ ಬಿ.ಜಿ. ಅನಂತಶಯನ, ಜಿ. ರಾಜೇಂದ್ರ, ಅಜ್ಜಿನಿಕಂಡ ಮಹೇಶ್ ನಾಚಯ್ಯ, ಉಳ್ಳಿಯಡ ಡಾಟಿ ಪೂವಯ್ಯ, ಜಿ. ಚಿದ್ವಿಲಾಸ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...