ಕೊಡಗು | ಸೆ.16ರಂದು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ

Date:

ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ ಪೂವಯ್ಯ ಹೇಳಿದ್ದಾರೆ.

ಬೆಳ್ಳಿ ಮಹೋತ್ಸವ ಆಚರಣಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅವರು ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

“ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್‌ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 1 ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾಗುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಲಾಂಛನವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅನಾವರಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ ಪಿ ಸುಜಾ ಕುಶಾಲಪ್ಪ, ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ತ್ಯಾಗರಾಜ್, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ ರಾಜೇಂದ್ರ, ಗೌರವಾಧ್ಯಕ್ಷೆ ಬಿ ಆರ್ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಲಶಾಸ್ತ್ರ ಅಧ್ಯಯನ ವರದಿ; ಯಥಾವತ್ ಜಾರಿಗೆ ಕುಂಚಿಟಿಗರ ಆಗ್ರಹ

“ಜೀವನ್ ಚಿಣ್ಣಪ್ಪ, ಎಚ್.ಟಿ. ಅನಿಲ್, ಡಾ.ಉಳ್ಳಿಯಡ ಎಂ. ಪೂವಯ್ಯ, ಜಗದೀಶ್ ಬೆಳ್ಯಪ್ಪ, ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ ಚಿದ್ವಿಲಾಸ್, ಡಾಟಿ ಪೂವಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.
ಕೊಡಗು ಪ್ರೆಸ್ ಕ್ಲಬ್ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಮನರಂಜನಾ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ ಆರ್ ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...