ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

Date:

ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ ರಾಮರಾಜನ್‌ ಕೋರಿದ್ದಾರೆ.

2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೇವ್ ಪಾರ್ಟಿ ನೆಪದಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಅಥವಾ ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿ ಸಂಖ್ಯೆ: 08272 228330, 9480804900ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ  ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಪ್ರಕಟಣೆ ಹೊರಡಿಸಿದ್ದಾರೆ.

“ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳ ಮಾಲೀಕರು Noise Pollution (Regulation and Control) Rules-2000 ರ ಅನ್ವಯ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‌ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ ಸಿಸ್ಟಂ, ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ, ಸರಬರಾಜು ಮತ್ತು ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಕಲಂ: 25 ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಧಿಕಾರಿಗಳ ನಿರ್ಲಕ್ಷ್ಯ; ದಸಂಸ ಆಕ್ರೋಶ

“ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಎಲ್ಲಿಯೂ ಬಹಿರಂಗಪಡಿಸುವುದಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...