ಕೊಡಗು | ಕಥೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮ

Date:

ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹಮದ್ ಅವರು ಕಿವಿಮಾತು ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ.ಡಿಸೋಜಾ ರವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕಥೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ವಿದ್ಯಾರ್ಥಿಗಳು ಅವರ ಇಚ್ಛೆಯಂತೆ ಕಲಿತು ಬರೆಯುವ ಕಥೆಗಿಂತ ವಿಷಯ ಆಧಾರಿತ ಕಥೆಯನ್ನು ಬರೆಯಬೇಕೆನ್ನುವ ಉದ್ದೇಶದಿಂದ ಪರಿಷತ್ತು ವಿದ್ಯಾರ್ಥಿಗಳಿಗೆ ಆಯ್ಕೆ ವಿಷಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಅನುಭವ ಹಾಗೂ ಭಾವನೆಗಳನ್ನು ಕೇಂದ್ರೀಕರಿಸಿ ಜನರ ಮನ ಮುಟ್ಟುವಂತೆ ಕಥೆ ಬರೆಯಲು ಸಾಧ್ಯವಾಗಲಿ” ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರಹಗಾರ್ತಿ ಸುನಿತಾ ಕುಶಾಲನಗರ ಮಾತನಾಡಿ, “ಕಥೆ ಬರೆಯಬೇಕೆಂದರೆ ಮೊದಲು ಮೂಲ ಹಾಗೂ ಅನುವಾದಿತ ಕಥೆಗಳನ್ನು ಓದಿಕೊಳ್ಳಬೇಕು. ಕಥೆ ಅನುಕರಣೆಯಾಗಬೇಕೆಂದಿಲ್ಲ ಮನಸಿಗೆ ಮೂಡಿದ ವಿಷಯಗಳ ಕುರಿತು ಕಥೆ ಬರೆಯಬಹುದು. ಲೋಕ ಸಾಹಿತ್ಯದ ಕುರಿತು ತಿಳಿದುಕೊಂಡರೆ ಕಥೆ ಬರೆಯಲು ಅನುಕೂಲವಾಗುತ್ತದೆ. ಕಥೆ ಎಂದಿಗೂ ದೊಡ್ಡದಾಗಿರದೆ ಸಣ್ಣ ಕಥೆಗಳನ್ನು ಬರೆದರೆ ಆ ಬರಹ ಹೆಚ್ಚಿನ ಜನರನ್ನು ತಲುಪುತ್ತದೆ” ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ‌ ಆರ್ ವಿಜಯ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, “ಕಥೆ ಬರೆಯಬೇಕೆಂದರೆ ಕಥೆಯನ್ನು ಓದುವ ಹಾಗೂ ಕೇಳುವ ಮನಸಿರಬೇಕು. ಇಂದಿನ ಕಥಾ ಸ್ಪರ್ಧೆಗೆ ಆಗಮಿಸಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿದರೆ ಖಂಡಿತ ಮುಂದೊಂದು ದಿನ ಜಿಲ್ಲೆಯಲ್ಲಿ ಉತ್ತಮ ಕಥೆಗಾರರು ರೂಪುಗೊಳ್ಳಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್ ಮಾತನಾಡಿ, “ಕಥೆ ಬರೆಯುವಾಗ ಜನಪದ ಭಾಷೆಯನ್ನು ಬಳಸಿಕೊಂಡರೆ ಜನರ ಮನಸನ್ನು ತಲುಪುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಪೋಷಕರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಮಂಜುನಾಥ್ ಸೇರಿದಂತೆ 150 ಮಂದಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...