ಕೊಡಗು | ಕೊರೊನಾ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಚಿವ ಭೋಸರಾಜು ಸೂಚನೆ

Date:

  • ದೂರವಾಣಿ ಮೂಲಕ ಪರಿಸ್ಥಿತಿಯ ಮಾಹಿತಿ ಪಡೆದ ಸಚಿವರು
  • ಕೇರಳ ಗಡಿಭಾಗದಲ್ಲಿ ಮುಂಜಾಗ್ರತೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ

ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್‌.1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌ ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆ ಗಡಿಗೆ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೊನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು, ಎಲ್ಲ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಿಕ್‌ನಿಕ್‌ ಹೋದ ಒಂದೇ ಕುಟುಂಬದ ಐವರು ನೀರುಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...