ಕೊಡಗು | ಕಾಡಾನೆ ದಾಳಿ; ಗಂಭೀರ ಗಾಯ

Date:

ಕೊಡಗು ಜಿಲ್ಲೆಯಲ್ಲಿ ಆನೆಗಳು ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಮುಂಜಾನೆ ಹಾಲು ತರಲು ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ಹಿಂಡು ದಾಳಿ ಮಾಡಿದೆ. ಇದರಿಂದ ಗಾಯಗೊಂಡ ವೃದ್ಧರ ಸ್ಥಿತಿ ಗಂಭೀರವಾಗಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಡಂಗ ಮರೂರು ಗ್ರಾಮದಲ್ಲಿ‌ ಘಟನೆ ಸಂಭವಿಸಿದ್ದು, ಕಡಂಗ ಮರೂರು ಗ್ರಾಮದ ನಿವಾಸಿ ಅಮ್ಮಂಡ ಸುಬ್ರಹ್ಮಣಿ(75) ದಾಳಿಗೊಳಗಾದವರು.

ಅಮ್ಮಂಡ ಸುಬ್ರಹ್ಮಣಿ ಅವರು ಹಾಲು ತರಲು ಮನೆಯಿಂದ ಅಂಗಡಿಗೆ ತೆರಳುವ ಸಂದರ್ಭದಲ್ಲಿ ಕಡಂಗ ಮರೂರು ಗ್ರಾಮದ ಭದ್ರಕಾಳಿ ದೇವಾಲಯದ ಸಮೀಪದ ತೋಟದಿಂದ ಏಕಾಏಕಿ ಬಂದ ಮೂರು ಕಾಡಾನೆಗಳು ಸುಬ್ರಹ್ಮಣಿ ಅವರ ಮೇಲೆ ದಾಳಿ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡಾನೆ ದಾಳಿಯಿಂದ ಕೈ ಕಾಲುಗಳಿಗೆ ತೀವ್ರ ಪಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ‌ಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಸರ್ಕಾರದ ಮೀಸಲಾತಿ ಪಡೆಯಲು ಧರ್ಮ ಮುಖ್ಯವಲ್ಲ: ಜಯಪ್ರಕಾಶ್ ಹೆಗ್ಡೆ

ಕೊಡಗು ಜಿಲ್ಲೆಯಲ್ಲಿ ದಿನಬೆಳಗಾದರೆ ಕಾಡಾನೆಗಳ ಗುಂಪು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಿದ್ದು, ರೈತರು ಬೆಳೆದ ಬೆಳೆಗಳನ್ನ ನಾಶ ಮಾಡುವುದರೊಂದಿಗೆ ಜನರ ಮೇಲೂ ದಾಳಿ ನಡೆಸುತ್ತಿವೆ. ಪರಿಣಾಮ ಸ್ಥಳೀಯರು ಓಡಾಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕಡಿವಾಣ ಹಾಕುವಂತೆ ಕೊಡಗಿನ ಜನತೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...