ವಿರಾಜಪೇಟೆ | ಕೂವಲೆರ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ಆರಂಭ

Date:

ಪೊನ್ನಂಪೇಟೆ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ “ಕೂವಲೆರ ಚಿಟ್ಟಡೆ ಕಪ್ -2025” ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.

ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿಗೆ ಎಲ್ಲ ಸಿದ್ಧತೆಗಳು ನಡೆದಿವೆ.

ಕೊಡವ ಮುಸ್ಲಿಂರ ಪ್ರಾತಿನಿಧಿಕ ಸಂಘಟನೆಯಾಗಿರುವ ‘ಕೊಡವ ಮುಸ್ಲಿಂ ಅಸೋಸಿಯೇಷನ್‌ನ ಅನುಮೋದಿತ ಮನೆತನದವರಿಗೆ ಮಾತ್ರ ಈ ಕೌಟುಂಬಿಕ ಪಂದ್ಯಾವಳಿ ಸೀಮಿತವಾಗಿದ್ದು, ಇದರಂತೆ ಒಟ್ಟು 43 ಕುಟುಂಬ ತಂಡಗಳು ಈ ಪಂದ್ಯಾವಳಿಗಾಗಿ ನೋಂದಾಯಿಸಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯಾವಳಿ ವೇಳೆ ಪ್ರೇಕ್ಷಕರ ಅನುಕೂಲಕ್ಕಾಗಿ ಮೈದಾನದ ಸುತ್ತಲೂ ಎರಡು ಬೃಹತ್ ಗ್ಯಾಲರಿಗಳನ್ನು ನಿರ್ಮಿಸಲಾಗಿದೆ. ಪಂದ್ಯಾವಳಿಯನ್ನು ಆಯೋಜಿಸಿರುವ ಕುಟುಂಬದ ವತಿಯಿಂದ ವಿಜೇತರಿಗೆ ಒಟ್ಟು ನಾಲ್ಕು ಸ್ಥಾನದ ಬಹುಮಾನಗಳನ್ನು ನೀಡಲಾಗುವುದು.

“ಚಾಂಪಿಯನ್ ತಂಡಕ್ಕೆ ₹55,555/-, ರನ್ನರ್ಸ್ ತಂಡಕ್ಕೆ ₹33,333/-, ತೃತೀಯ ಸ್ಥಾನ ಪಡೆಯುವ ತಂಡಕ್ಕೆ ₹22,222/- ಹಾಗೂ 4ನೇ ಸ್ಥಾನ ಪಡೆಯುವ ತಂಡಕ್ಕೆ ₹11,111/- ನಗದು ಬಹುಮಾನ ಸೇರಿದಂತೆ ತಲಾ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುವುದು. ಜತೆಗೆ ಚಾಂಪಿಯನ್ ತಂಡಕ್ಕೆ ಕೆಎಂಎ ವಿನ್ನರ್ಸ್ ರೋಲಿಂಗ್ ಟ್ರೋಫಿಯನ್ನು ಪ್ರದಾನ ಮಾಡಲಾಗುವುದು” ಎಂದು ಆಯೋಜನ ಸಮಿತಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಕೂವಲೆರ ಪೈಝ ಸಜೀರ್ ತಿಳಿಸಿದ್ದಾರೆ.

“ಪಂದ್ಯದ ವೇಳೆ ಹೆಚ್ಚು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಕೇರಳದಿಂದ ನುರಿತ ವಾಲಿಬಾಲ್ ತೀರ್ಪುಗಾರರನ್ನು ಕರೆಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಪಂದ್ಯಾವಳಿಯ ಉದ್ಘಾಟನೆಯ ಅಂಗವಾಗಿ ಮೊದಲಿಗೆ ರಜಿತ್ ಫ್ರೆಂಡ್ಸ್ ಮತ್ತು ಲಿಮ್ರಾ ಫ್ರೆಂಡ್ಸ್ ತಂಡಗಳ ನಡುವೆ ಪ್ರದರ್ಶನ ಪಂದ್ಯ ಆಯೋಜಿಸಲಾಗಿದೆ. ಮೂರು ದಿನಗಳ ಕಾಲವೂ ಪಂದ್ಯಾವಳಿಯನ್ನು ಸಕ್ಸಸ್ ಸ್ಪೋರ್ಟ್ಸ್ ಯುಟ್ಯೂಬ್ ಚಾನೆಲ್ ಮೂಲಕ ನೇರ ಪ್ರಸಾರಗೊಳಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ?: ಕೊಡಗು | ತಾಲೂಕು ಆಡಳಿತದ ನಿರ್ಲಕ್ಷ್ಯ; ಪೊನ್ನಂಪೇಟೆ ಬಡವರಿಗಿಲ್ಲ ಸೂರು; ದಸಂಸ ಪ್ರತಿಭಟನೆ

“ಕ್ರೀಡೆ ಮನಸ್ಸಿಗೆ ಆನಂದ ನೀಡುವುದಷ್ಟೇ ಅಲ್ಲ, ಪರಸ್ಪರ ಒಂದುಗೂಡಿಸುತ್ತದೆ. ಜತೆಗೆ ಕ್ರೀಡೆ ಮನುಷ್ಯರನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತದೆ. ಈ ಹಿನ್ನೆಲೆಯಲ್ಲಿ ಸಮುದಾಯದವರನ್ನು ಒಂದೆಡೆ ಸೇರಿಸಲು ಇದೇ ಮೊದಲ ಬಾರಿಗೆ ಕೊಡವ ಮುಸ್ಲಿಂ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿಯ ಆತಿಥ್ಯವನ್ನು ಚಿಟ್ಟಡೆಯ ಕೂವಲೆರ ಕುಟುಂಬ ವಹಿಸಿದೆ” ಎಂದರು.

“ಕೊಡಗಿನ ವಾಲಿಬಾಲ್ ಕ್ರೀಡೆಗೆ  ಕೊಡವ ಮುಸ್ಲಿಂ ಕ್ರೀಡಾಪಟುಗಳ ಕೊಡುಗೆ ಅನನ್ಯವಾದದ್ದು. ಆದರೆ ಇಂದಿಗೂ ಅದೆಷ್ಟೋ ಸಮುದಾಯದ ಪ್ರತಿಭೆಗಳು ಸೂಕ್ತ ವೇದಿಕೆ ಮತ್ತು ಅವಕಾಶದ ಕೊರತೆಯನ್ನು ಎದುರಿಸುತ್ತಿದ್ದಾರೆ. ಪ್ರತಿಭೆಗಳನ್ನು ಗುರುತಿಸಿ ಅಂತವರನ್ನು ಪ್ರೋತ್ಸಾಹಿಸುವ ಪ್ರಯತ್ನ ಮಾಡಲಾಗುವುದು. ಅಲ್ಲದೆ, ಕುಗ್ರಾಮಗಳಲ್ಲೂ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಬಹುದು. ಹೀಗೆ ಚಿಕ್ಕ ಊರಿನಲ್ಲಿ ದೊಡ್ಡ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿ ಸಮಾಜಕ್ಕೆ ಸಂದೇಶವೊಂದನ್ನು ನೀಡುವ ಉದ್ದೇಶವೂ ಇದರ ಹಿಂದೆ ಅಡಗಿದೆ” ಎಂದು ಪಂದ್ಯಾವಳಿ ಆಯೋಜಕರು ಅಭಿಪ್ರಾಯಪಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...