ಉಡುಪಿ | ಕುಂದಾಪುರದ ಬೀಚ್ ನಲ್ಲಿ ಈಜಲು ಬಂದ ಮೂವರು ಸಹೋದರರು ನೀರು ಪಾಲು

Date:

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಬೀಚಿನಲ್ಲಿ ಕುಟುಂಬ ಸಮೇತರಾಗಿ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ.

ತಕ್ಷಣದ ಮಾಹಿತಿಯಂತೆ ಅಂಪಾರು ಐದು ಸೆಂಟ್ ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಸಾವನ್ನಪ್ಪಿದ್ದರೆ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು ಇದುವರೆಗೆ ಪತ್ತೆ ಆಗಿರುವುದಿಲ್ಲ. ಮೂರು ಜನರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್‌ ಎನ್‌ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಇಂದು ಶನಿವಾರ ಆಗಿದ್ದರಿಂದ ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೊಡಿ ಬೀಚಿನಲ್ಲಿ ಈಜಾಡಲು ಬಂದಿದ್ದರು ಎನ್ನಲಾಗಿದೆ. ಗಂಭೀರ ಗೊಂಡಿರುವ ಧನುಷ್ ಹಾಗೂ ಶವವಾಗಿ ಪತ್ತೆಯಾಗಿರುವ ಧನರಾಜ್‌ ಇಬ್ಬರು ಮುಖಕ್ಕೆ ಮಾಸ್ಕಸ್ಕ್ ಮತ್ತು ಕಣ್ಣಿಗೆ ಕಣ್ಣವಚ ಧರಿಸಿದ್ದರು. ಮೇಲ್ನೋಟಕ್ಕೆ ಈಜಾಡಲು ಸಿದ್ದರಾಗಿ ಬಂದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂದರ್ಭ ಬೆಂಗಳೂರಿನ ಪ್ರವಾಸಿಗರುವರು ಗಮನಿಸಿ ತಕ್ಷಣ ಸಮುದ್ರಕ್ಕೆ ಹಾರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ ಆದರೆ ದಾಮೋದರ ಪ್ರಭು ಅವರ ಅಣ್ಣನ ಮಗ ದರ್ಶನ್ ನಾಪತ್ತೆಯಾಗಿದ್ದು ಅವರ ಪತ್ತೆಗಾಗಿ ಈಜು ತಜ್ಞರು ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...