ಉಡುಪಿ | ಕೋಡಿಬೆಂಗ್ರೆ ಬೀಚ್ ಬಳಿ ಪ್ರವಾಸಿ ದೋಣಿ ದುರಂತ: ಮತ್ತೊಬ್ಬ ಯುವತಿ ಸಾವು

Date:

ಕೋಡಿಬೆಂಗ್ರೆ ಬೀಚ್ ಸಮೀಪದ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ನದಿ–ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ

ಈ ಮೊದಲು ಅಪಘಾತದಲ್ಲಿ ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ (27)ಹಾಗೂ ಚಾಮರಾಜನಗರ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು (25) ಮೃತಪಟ್ಟಿದ್ದರು.

ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿಶಾ (23) ಮಂಗಳವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮತ್ತೊಬ್ಬ ಗಾಯಾಳು ಧರ್ಮರಾಜ (26) ಅವರ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರು ಹಾಗೂ ಗಾಯಾಳುಗಳು ಎಲ್ಲರೂ ಮೈಸೂರಿನ ಖಾಸಗಿ ಬಿಪಿಒ ಕಾಲ್ ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ. ಪ್ರವಾಸಕ್ಕಾಗಿ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ಕುರಿತು ಸಂಬಂಧಿಸಿದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೋಣಿ ಸಂಚಲನದ ವೇಳೆ ಸುರಕ್ಷತಾ ಕ್ರಮಗಳ ಪಾಲನೆ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...