ಉಡುಪಿ | ಕೋಡಿಬೇಂಗ್ರೆ ಬೋಟ್ ದುರಂತ ಪ್ರಕರಣ: ಮೂವರು ಬಂಧನ

Date:

ಕೋಡಿಬೇಂಗ್ರೆ ಅಳಿವೆಬಾಗಿಲು ಪ್ರದೇಶದ ಸ್ವರ್ಣ ನದಿಯಲ್ಲಿ ನಡೆದ ಭೀಕರ ಬೋಟ್ ದುರಂತದಲ್ಲಿ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ
ಜನವರಿ 26ರಂದು ಬೆಳಿಗ್ಗೆ 10.45ರ ಸುಮಾರಿಗೆ ಮೈಸೂರು ನಿವಾಸಿ ಗುರುಪ್ರಸಾದ್ (34) ಸೇರಿದಂತೆ ಒಟ್ಟು 29 ಮಂದಿಯನ್ನು ಆರೋಪಿಯಾದ ಸುಹಾಸ್ ಎರಡು ಪ್ರತ್ಯೇಕ ಬೋಟ್‌ಗಳಲ್ಲಿ ದೋಣಿ ವಿಹಾರಕ್ಕೆ ಕರೆದೊಯ್ದಿದ್ದನು. ಒಂದೇ ಬೋಟ್‌ನಲ್ಲಿ 14 ಮಂದಿ ಹಾಗೂ ಇನ್ನೊಂದು ಬೋಟ್‌ನಲ್ಲಿ 15 ಮಂದಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ 11.15ರ ವೇಳೆಗೆ ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ‘ದಿ ವೇವ್ ರೈಡರ್’ ಎಂಬ ಹೆಸರಿನ ಬೋಟ್ ಅನ್ನು ಚಾಲಕರಾದ ಸೂಫಿಯಾನ್ ಮತ್ತು ವಾಸು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ತೀವ್ರವಾಗಿ ಎಡಬದಿಗೆ ತಿರುಗಿಸಿ ಚಲಾಯಿಸಿದ್ದರಿಂದ ಬೋಟ್ ಮಗುಚಿಬಿದ್ದಿದೆ.

ಈ ವೇಳೆ ಬೋಟ್‌ನಲ್ಲಿದ್ದ 14 ಮಂದಿ ನೀರಿಗೆ ಬಿದ್ದು, ಶಂಕರಪ್ಪ (27), ಕುಮಾರಿ ಸಿಂಧು.ಪಿ (23) ಮತ್ತು ಕುಮಾರಿ ದಿಶಾ (26) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ, ಆರೋಪಿಗಳು ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಬೋಟ್ ವಿಹಾರ ನಡೆಸಿದ್ದಲ್ಲದೆ, ಬೋಟ್‌ ಪ್ರವಾಸಿಗರ ವಿಹಾರಕ್ಕೆ ಯೋಗ್ಯವೆಂಬ ಧೃಢೀಕರಣ ಪತ್ರವೂ ಹೊಂದಿರಲಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಲ್ಲದೇ, ಲೈಫ್ ಜಾಕೆಟ್ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದುದೂ ತನಿಖೆಯಲ್ಲಿ ದೃಢಪಟ್ಟಿದೆ.

ಘಟನೆ ನಡೆದ ಸ್ಥಳ ಕೋಟ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿರುವುದರಿಂದ ಪ್ರಕರಣವನ್ನು ಕೋಟ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುಹಾಸ್ ಶ್ರೀಯಾನ್ (23), ಸೂಫಿಯಾನ್ (20) ಹಾಗೂ ವಾಸು ಮೆಂಡನ್ (52)ರನ್ನು ದಸ್ತಗಿರಿ ಮಾಡಲಾಗಿದ್ದು, ಅವರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...