ಕೋಲಾರ | ದೇಶದಲ್ಲಿ ವರ್ಷಕ್ಕೆ 8 ಲಕ್ಷ ಜನ ಆತ್ಮಹತ್ಯೆ : ನ್ಯಾ.ಸುನೀಲ್ ಎಸ್.ಹೊಸಮನಿ ಕಳವಳ

Date:

ಮಕ್ಕಳು, ವಿದ್ಯಾರ್ಥಿಗಳು ಹಾಗೂ ರೈತರು ಸೇರಿ ಪ್ರತಿ ವರ್ಷ 8 ಲಕ್ಷಕ್ಕಿಂತ ಅಧಿಕ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದು ಕಳವಳಕಾರಿ ಸಂಗತಿಯಾಗಿದೆ. ಇದರಿಂದ ದೇಶದ ಅಭಿವೃದ್ಧಿಗೆ ತೊಡುಕಾಗಲಿದ್ದು, ಆತ್ಮಹತ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ್ ಎಸ್. ಹೊಸಮನಿ ಕಳವಳ ವ್ಯಕ್ತಪಡಿಸಿದರು.

ಕೋಲಾರ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಘಟಕದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಧ್ಯಕ್ಷತೆಯವಹಿಸಿ ಅವರು ಮಾತನಾಡಿದರು.

ಕೌಟುಂಬಿಕ ಕಲಹಗಳಿಂದ, ಸಣ್ಣಪುಟ್ಟ ವಿಚಾರಗಳಿಂದ ಹಾಗೂ ಯಾವುದೇ ಮಾದಕ ವಸ್ತುಗಳನ್ನು ಅಧಿಕವಾಗಿ ಬಳಸುವುದರಿಂದ ಆತ್ಮಹತ್ಯೆ ಮೊರೆಹೋಗುತ್ತಿದ್ದಾರೆ. ಕೇವಲ ವಿಶ್ವ ಆತ್ಮಹತ್ಯೆ ತಡೆ ದಿನಕ್ಕೆ ಸೀಮಿತವಾಗದೆ ಪ್ರತಿದಿನ ಅರಿವು ಮೂಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೋವೈದ್ಯರಾದ ಡಾ.ವಿಜೇತ ದಾಸ್‌ ಮಾತನಾಡಿ, ಆತ್ಮಹತ್ಯೆಯನ್ನು ಮಾಡಿಕೊಳ್ಳುವವರು ಕೆಲವು ಮುನ್ಸೂಚನೆಗಳನ್ನು ಕೊಡುತ್ತಾರೆ. ಅವುಗಳೆಂದರೆ ಒಂಟಿಯಾಗಿರುವುದು, ಮೌನವಾಗಿರುವುದು, ಪದೇ-ಪದೇ ಸಾಯುವ ಬಗ್ಗೆ ಮಾತನಾಡುವುದು ಹಾಗೂ ಆತ್ಮಹತ್ಯೆ ವಿಡಿಯೋಗಳನ್ನು ಹೆಚ್ಚಾಗಿ ನೋಡುತ್ತಿರುತ್ತಾರೆ. ಪ್ರತಿ 40 ನಿಮಿಷಕ್ಕೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುತ್ತಾರೆ. ಇದರಲ್ಲಿ 25 ಜನ ವಿಫಲರಾಗಿರುತ್ತಾರೆ. ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಮಾನಸಿಕ ಕಾಯಿಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಆಪ್ತ ಸಮಾಲೋಚನೆ ಬೇಕಾದವರು 14419ಗೆ ಕರೆ ಮಾಡಿ ಉಚಿತವಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ನಗರಸಭಾ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ರಾಣಿಯಮ್ಮ ಅವಿರೋಧ ಆಯ್ಕೆ

ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಮಮತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಂ.ಪ್ರೇಮ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಚಂದ್ರಪ್ಪ, ಆರ್ ಎಲ್ ಜಾಲಪ್ಪ ಆಸ್ಪತ್ರೆ ಮನೋವೈದ್ಯರು ಡಾ.ಮಹಮ್ಮದ್ ಮತ್ತು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...