ಕೋಲಾರ | ಮಂದಿನ ಎಲ್ಲ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ: ಲತೀಫ್ ಖಾನ್ ಅಮೀರ್ ಪಠಾಣ್

Date:

ಮುಂದಿನ ದಿನಗಳಲ್ಲಿ ಅಲ್ ಇಂಡಿಯಾ ಮಜಲಿಸ್ -ಎ-ಇತ್ತಹಾದುಲ್ ಮುಸ್ಲಿಮೀನ್ ಪಕ್ಷ ಸದೃಢವಾಗಿ ಸಂಘಟನೆ ಮಾಡುವುದರ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಹೆಚ್ಚಿನ ಜನಸೇವೆ ಮಾಡಲು ಅಧಿಕಾರಕ್ಕಾಗಿ ಮುಂದೆ ಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಲತೀಫ್ ಖಾನ್ ಅಮೀರ್ ಪಠಾಣ್ ತಿಳಿಸಿದರು.

ಕೋಲಾರ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ನಂತರ ಖಾಸಗಿ ಮದುವೆ ಮಂಟಪದಲ್ಲಿ ಪಕ್ಷದ ಜಿಲ್ಲಾ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ನೂತನ ಕಾರ್ಯಕರ್ತರು ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಪರಿಪೂರ್ಣ ರಾಜಕಾರಣಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಬ್ಯಾರಿಸ್ಟರ್ ಅಸುದುದ್ದೀನ್ ಓವೈಸಿ ಅವರ ನೇತೃತ್ವದಲ್ಲಿ ಪಕ್ಷವನ್ನು ಇಡೀ ರಾಜ್ಯಾದ್ಯಂತ ಸಂಘಟಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪಕ್ಷದ ಅಜೆಂಡಾ ದೇಶವನ್ನು ಸಾಲ ಮುಕ್ತಗೊಳಿಸುವುದಲ್ಲದೆ, ಪ್ರಮುಖವಾಗಿ ದಾರಿ ತಪ್ಪುತ್ತಿರುವ ಯುವಕರಿಗೆ ಉದ್ಯೋಗ ನೀಡಿ ಮಾದಕ ಮುಕ್ತ ದೇಶವನ್ನಾಗಿಸುವುದು ಹಾಗೂ ಸ್ವಚ್ಛ ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡಿ.ದೇವರಾಜ ಅರಸು ಜನ್ಮದಿನಾಚರಣೆ

ಕಾರ್ಯಕ್ರಮದಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಜಿಲ್ಲಾ ಅಧ್ಯಕ್ಷರು ಹಾಗೂ ಹೈದರಾಬಾದ್‌ನಿಂದ ಆಗಮಿಸಿದ್ದ ಮುಖಂಡರು, ಮತ್ತು ಕೋಲಾರ ಜಿಲ್ಲಾ ಅಧ್ಯಕ್ಷ ಸಯೈದ್ ನಜೀಬ್ ಪಾಷ, ಜಿಲ್ಲಾ ಜೆನರಲ್ ಸೆಕ್ರೆಟರಿ ಆಗಿ ಮೊಹಮ್ಮದ್ ಎನ್ ಅಲಿ ಸಾಹಿಕ್, ಜಾಯಿಂಟ್ ಸೆಕ್ರೆಟರಿಗಳಾಗಿ ನಾಗರಾಜ್, ಸಿಭಾಗತ್ ಉಲ್ಲಾ, ತಬ್ರೇಜ್ ಖಾನ್,
ಸಿ ವಿ ವರದರಾಜು, ಖಜಾಂಚಿಯಾಗಿ ಮೊಹಮ್ಮದ್ ಮಿನಹಜ್ ಆಲಿ, ಸದಸ್ಯರುಗಳಾಗಿ ಜಮೀರ್ ಪಾಷ ಎನ್, ಸೈಯದ್ ಅದಿಲ್, ಸೈಯದ್ ಅಯೂಬ್ ಪಾಷ, ಶೈಕ್ ಸರ್ದಾರ್ ಹಾಗೂ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...