ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಖಾಯಂಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಕೋಲಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, “ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ” ಎಂದು ಆರೋಪಿಸಿದರು.

“ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, “ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ” ಎಂದರು.

ಇದನ್ನೂ ಓದಿ: ಕೋಲಾರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...