ಕೋಲಾರ | ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ, ಇತರೆ ಸಮುದಾಯಗಳ ಎಸ್‌ಟಿ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

Date:

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-1ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್‌ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೋಲಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ, “ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು. ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿರುವುದನ್ನು ಕೂಡಲೇ ನಿಲ್ಲಿಸಬೇಕು. ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಡಿತರ ಅಕ್ಕಿ ಅಕ್ರಮ ದಾಸ್ತಾನು ; ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ

ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ, “ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು. ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು. ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ, ಕೊಲೆ, ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು. ಸಮುದಾಯದ ಬೇಡಿಕೆಗಳು ಕಾಲಮಿತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಗೆ ಬಹಿಷ್ಕಾರ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...