ಕೋಲಾರ | ಜು. 9ರ ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರಕ್ಕೆ ಸಿಪಿಐಎಂ ಪಕ್ಷ ಬೆಂಬಲ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಬಂಡವಾಳಗಾರರ ಹಿತದೃಷ್ಟಿಯಿಂದ ಕಾರ್ಮಿಕರ ರಕ್ಷಣೆಗಾಗಿ ಇದ್ದ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಸಂಹಿತೆಗಳನ್ನಾಗಿ ಅನುಷ್ಠಾನಕ್ಕೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಂಡು ಮತ್ತಷ್ಟು ಶೋಷಣೆ ಮಾಡಲು ಮುಂದಾಗುತ್ತಿದೆ. ಇದರ ವಿರುದ್ದ ಜುಲೈ 9 ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರಕ್ಕೆ ಸಿಪಿಐಎಂ ಪಕ್ಷ ಕೂಡ ಬೆಂಬಲಿಸಲಿದೆ ಎಂದು ಪಕ್ಷದ ಕೋಲಾರ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು.

ಕೋಲಾರದ ಸಿಪಿಐಎಂ ಪಕ್ಷದ ಕಚೇರಿಯಲ್ಲಿ ಸಭೆಯ ನಂತರ ಮಾತನಾಡಿದ ಅವರು, ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುವ ಸಂಘ ಕಟ್ಟುವ ಎಲ್ಲಾ ಹಕ್ಕುಗಳು ಮೊಟಕುಗೊಳ್ಳಲಿದೆ. ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವುದನ್ನು ಬಿಟ್ಟು ರೈತರ ಭೂಮಿಗಳನ್ನ ಬಂಡವಾಳಗಾರರ, ಕಾರ್ಪೊರೇಟ್‌ ಶಕ್ತಿಗಳ ಕೈಗೆ ಸೇರುವ ನೀತಿಗಳು ಜಾರಿಯಾಗುತ್ತಿವೆ. ಇದರ ವಿರುದ್ದ ನಿರಂತರವಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದರು.

ದೇಶದಲ್ಲಿ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ, ಕನಿಷ್ಠ ವೇತನ, ಸಾಮಾಜಿಕ ಭದ್ರತೆಗಳಿಗಾಗಿ ಹೋರಾಟ ಮುಂದುವರಿಸಿರುವಾಗ ಕಾರ್ಮಿಕರ ಕೆಲಸದ ಅವಧಿ ಎಂಟು ಗಂಟೆಯಿಂದ 12 ಗಂಟೆಗೆ ಹೆಚ್ಚಿಸುವ ಪ್ರಯತ್ನಗಳು ಸೇರಿ ಆನೇಕ ಕಾರ್ಮಿಕ ವಿರೋಧಿ ಕಾನೂನುಗಳನ್ನು ಸರ್ಕಾರಗಳು ಮುಂದುವರಿಸಿವೆ. ಇಂತಹ ಸನ್ನಿವೇಶದಲ್ಲಿ ದೇಶದ ಜೆಸಿಟಿಯು ಸಂಘಟನೆಯ ನೇತೃತ್ವದಲ್ಲಿ ಕಾರ್ಮಿಕ ಮತ್ತು ರೈತಾಪಿ ವರ್ಗದ ರಕ್ಷಣೆಗಾಗಿ ಅಖಿಲ ಭಾರತ ಮುಷ್ಕರಕ್ಕೆ ಕರೆ ಕೊಟ್ಟಿದೆ. ಮುಷ್ಕರವನ್ನು ಯಶಸ್ವಿಗೊಳಿಸಲು ಸಿಪಿಐಎಂ ಕೋಲಾರ ಜಿಲ್ಲಾ ಸಮಿತಿ ಈ ಮುಷ್ಕರವನ್ನು ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಂಟ್ವಾಳ | ಮದುವೆಗೆ ನಿರಾಕರಣೆ: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ವಿ.ಗೀತಾ, ಟಿ ಎಂ ವೆಂಕಟೇಶ್,ಎಆರ್ ಬಾಬು ,ತಂಗರಾಜು, ಪಾತಕೋಟ ನವೀನ್ ಕುಮಾರ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...