ಕೋಲಾರ ತಾಲೂಕಿನ ನರಸಾಪುರ ಹಾಗೂ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳಾ ಅವರಿಗೆ ಮನವಿ ನೀಡಿದರು.
ರಿಯಾಜ್ ಗೋರು ಮಾತನಾಡಿ, “ಕೋಲಾರ ಜಿಲ್ಲೆಯಲ್ಲಿ ಹೆಚ್ಚು ಮಂದಿ ಯುವಜನರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಬೆಂಗಳೂರಿಗೆ ಉದ್ಯೋಗಕ್ಕಾಗಿ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಭಾಗದಲ್ಲೇ ಹೆಚ್ಚು ಕೈಗಾರಿಕೆಗಳು ಇರುವುದರಿಂದ, ಸ್ಥಳೀಯವಾಗಿರುವ ಯುವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು
“ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ನೀಡಬೇಕೆಂದು ಹೆಳಿದ್ದಾರೆ. ಆದರೂ ಕಂಪನಿಗಳು ಸರಿಯಾದ ರೀತಿಯಲ್ಲಿ ಪಾಲಿಸುತ್ತಿಲ್ಲ. ಕಾರ್ಮಿಕ ಕಾಯ್ದೆಯನ್ನು ಸರಿಯಾದ ರೀತಿಯಲ್ಲಿ ಎಲ್ಲ ಕಂಪನಿಗಳು ಪಾಲಿಸಬೇಕು” ಎಂದು ಜಿಲ್ಲಾ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರಿಗೂ ಮನವಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಿಲ್ಲೆಯ ಗಣಿಭಾದಿತ ಪ್ರದೇಶಗಳಿಗೆ ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಭೇಟಿ
ಈ ಸಂದರ್ಭದಲ್ಲಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ ಅರ್ಬಾಜ್, ಪ್ರಶಾಂತ್, ಷಮ್ಮು, ತೌಸೀಫ್, ಇಬ್ರಾಹಿಂ, ಗುಲಾಮ್ ಇದ್ದರು.





