ಕೋಲಾರ | ವೈದ್ಯನ ಬೇಜವಾಬ್ದಾರಿತನ: ಇಂಜೆಕ್ಷನ್ ಪಡೆದ ಯುವಕ ಸಾವು

Date:

ಜ್ವರದಿಂದ ನರಳುತ್ತಿದ್ದ ಯುವಕನಿಗೆ ಖಾಸಗಿ ಕ್ಲಿನಿಕ್‌ ವೈದ್ಯ ಇಂಜೆಕ್ಷನ್‌ ನೀಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಸಮಯದಲ್ಲಿ ಯುವಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವಕ ನಾಗೇಂದ್ರಬಾಬು ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಶುಕ್ರವಾರ ಸಂಜೆ ಜ್ವರ ಹೆಚ್ಚಾದ ಕಾರಣ ಗ್ರಾಮದಲ್ಲೇ ಇದ್ದ ‘ಸನ್‌ರೈಸ್’ ಕ್ಲಿನಿಕ್‌ಗೆ ತೆರಳಿ ಇಂಜೆಕ್ಷನ್ ಪಡೆದಿದ್ದಾರೆ. ಆದರೆ, ಇಂಜೆಕ್ಷನ್ ಪಡೆದ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.

ನಾಗೇಂದ್ರಬಾಬುಗೆ ಇಂಜೆಕ್ಷನ್ ನೀಡಿದ ವೈದ್ಯ ಆಯುರ್ವೇದದಲ್ಲಿ ವೈದ್ಯಕೀಯ ಪಡೆದಿದ್ದಾರೆ. ಅವರು ಆಯುರ್ವೇದ ಚಿಕಿತ್ಸೆಯನ್ನು ಮಾತ್ರವೇ ನೀಡಬೇಕು. ಆದರೆ, ಆ ವೈದ್ಯ ಆಲೋಪತಿ ಚಿಕಿತ್ಸೆಯನ್ನೂ ನೀಡುತ್ತಿದ್ದರು. ಅಭ್ಯಾಸ ಮಾಡಿದ್ದ ವೃತ್ತಿಯೇ ಬೇರೆ, ಚಿಕಿತ್ಸೆ ನೀಡುತ್ತಿದ್ದ ವಿಧಾನವೇ ಬೇರೆಯಾಗಿದ್ದ ಕಾರಣದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಜೆಕ್ಷನ್‌ ಪಡೆದ ನಾಗೇಂದ್ರಬಾಬುಗೆ ಕೆಲವೇ ಸಮಯದಲ್ಲಿ ಮೂರ್ಚೆ ಬಂದಿದೆ. ಬಳಿಕ, ಹೃದಯ ಬಡಿತವು ಕಡಿಮೆಯಾಗಲಾರಂಭಿಸಿದೆ. ಕೂಡಲೇ ಅವರನ್ನು ಕೋಲಾರ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯ ಸೂಚಿಸಿದ್ದಾರೆ. ನಾಗೇಂದ್ರಬಾಬು ಅವರನ್ನು ಕೋಲಾರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಆಯುರ್ವೇದದಲ್ಲಿ ಅಭ್ಯಾಸ ಮಾಡಿ, ಆಲೋಪತಿ ಚಿಕಿತ್ಸೆ ನೀಡುತ್ತಿರುವ ವೈದ್ಯ ರಫೀಕ್‌ನ ಪರವಾನಗಿಯನ್ನು ರದ್ದುಗೊಳಿಸಬೇಕು. ಆತ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಚಿಕಿತ್ಸೆ ನೀಡದಂತೆ ನಿರ್ಬಂಧ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವೈದ್ಯನ ವಿರುದ್ಧ ಯುವಕನ ಸಂಬಂಧಿಕರು ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ವಕ್ಕಲೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಕೇಂದ್ರವೂ ಇದ್ದು. ಆ ಆಸ್ಪತ್ರೆಗೆ ಸರಿಯಾಗಿ ವೈದ್ಯರು ಬರುತ್ತಿಲ್ಲ. ನಿಯಮಿತವಾಗಿ ವೈದ್ಯರು ಬರುವಂತೆ ಆಯೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿರುವ ಆ್ಯಂಬುಲೆನ್ಸ್‌ ಕೆಟ್ಟಿದ್ದು, ಅದನ್ನು ರಿಪೇರಿ ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...