ಕೋಲಾರ | ಗ್ಯಾರೆಂಟಿ ಯೋಜನೆಗೆ ಎಸ್‌ಸಿ-ಎಸ್‌ಟಿ ನಿಧಿ ಬಳಸ ಬೇಡಿ: ಆಮ್ ಆದ್ಮಿ ಪಕ್ಷದಿಂದ ಡಿಸಿಗೆ ಮನವಿ

Date:

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನಗಳ ಅನುಷ್ಠಾನಕ್ಕೆ ಎಸ್‌ಸಿ ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ ಹಣವನ್ನು ಬಳಸಬಾರದೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ  ಪ್ರತಿಭಟನೆಯ ನೇತೃತ್ವವಹಿಸಿದ್ದ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ಡಾ.ವೆಂಕಟಾಚಲಪತಿ ಮಾತನಾಡಿ, “ಪ್ರಸ್ತುತ ಸಾಲಿನ ಬಜೆಟ್ ನಲ್ಲಿ ದಲಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲು ಇಟ್ಟಿದ್ದ 42 ಸಾವಿರ ಕೋಟಿ ರೂಪಾಯಿಗಳಲ್ಲಿ ಗ್ಯಾರೆಂಟಿ ಯೋಜನೆಗಳಿಗೆ ಸುಮಾರು 11 ಸಾವಿರ ಕೋಟಿ ರೂಪಾಯಿಗಳನ್ನು ಬಳಸಿಕೊಳ್ಳಲು ಸರ್ಕಾರ ಚಿಂತನೆ
ನಡೆಸುತ್ತಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ದಲಿತರಿಗೆ ಮೀಸಲು ಇಟ್ಟಿರುವ ಹಣವನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ಬಳಸಬಾರದು. ಸಂವಿಧಾನದ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳನ್ನು ಗೌರವಿಸಿ ದಲಿತರಿಗೆ ಮೀಸಲು ಇಟ್ಟಿರುವ ಹಣವನ್ನು ದಲಿತ ಸಮುದಾಯಗಳ ಅಭಿವೃದ್ಧಿಗೆ ಮಾತ್ರ ಬಳಸಬೇಕೆಂದು” ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಾಲಕೃಷ್ಣ, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್, ಮುಖಂಡರುಗಳಾದ ಶೇಷನ್, ಗೋಪಾಲ್, ವೇಣು ಗೋಪಾಲ್, ಖಾದೀರ್ ಬಾಷಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...