ಕೋಲಾರ | ಶಾಂತಿಯುತ ಈದ್ ಮಿಲಾದ್ ಆಚರಣೆಗೆ ಡಿವೈಎಸ್‌ಪಿ ಸೂಚನೆ

Date:

ಮುಸ್ಲಿಂ ಸಮುದಾಯದ ಪವಿತ್ರ ಈದ್ ಮಿಲಾದ್ ಹಬ್ಬದವನ್ನು ಕೋಲಾರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಆಚರಣೆ ಮಾಡಲು ಡಿವೈಎಸ್‌ಪಿ ಹುಮಾಯೂನ್‌ ನಾಗ್ತೆ ಸೂಚಿಸಿದರು.

ನಗರದ ಶತಶೃಂಗ ಭವನದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಕೋಆರ್ಡಿನೇಟ್ ಸಭೆ ನಡೆಸಿ ಮಾತನಾಡಿದ ಅವರು, “ಈದ್ ಮಿಲಾದ್ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಕಾನೂನು ರೀತಿಯಲ್ಲಿ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಹೈಕೋರ್ಟ್ ಆದೇಶವನ್ನು ತಿಳಿಸಿ ನಿಯಮಾನುಸಾರ ಆಚರಣೆಗೆ ಸಮುದಾಯದ ಮುಖಂಡರು ಸಹಕರಿಸಬೇಕು ಎಂದು ತಿಳಿಸಲಾಗಿದೆ. ಆದೇಶದಂತೆ ಡಿಜೆ ಬಳಕೆಗೆ ಯಾವುದೇ ರೀತಿಯ ಅನುಮತಿ ಇರುವುದಿಲ್ಲ. ಬ್ಯಾನರ್ ಕಟ್ಟಲು ನಗರಸಭೆ ಆಯುಕ್ತರ ಬಳಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪೊಲೀಸ್‌ ಇಲಾಖೆಯ ಸಂಪೂರ್ಣ ಸ‌ಹಕಾರದೊಂದಿಗೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ” ಎಂದು ತಿಳಿಸಿದರು.

ಕೋಲಾರ ಟೌನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸದಾನಂದ ಮಾತನಾಡಿ, “ಶಾಂತಿಯುತವಾಗಿ ಎಲ್ಲರೂ ಮಿಲಾದ್ ಹಬ್ಬವನ್ನು ಆಚರಿಸಿ. ಹೈಕೋರ್ಟ್ ಆದೇಶದಂತೆ ಗಣೇಶ ಹಬ್ಬಕ್ಕೂ ಡಿಜೆಗೆ ಅನುಮತಿ ಕೊಟ್ಟಿಲ್ಲ. ಅದೇ ರೀತಿ ಮಿಲಾದ್ ಹಬ್ಬಕ್ಕೂ ಡಿಜೆಗೆ ಅವಕಾಶ ಕೊಡುವುದಿಲ್ಲ. ಕಾನೂನಿದ ಅಡಿಯಲ್ಲಿ ಎಲ್ಲರೂ ಸೇರಿ ಹಬ್ಬ ಆಚರಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 02 at 10.12.45 AM

ಹಲವಾರು ಮುಸ್ಲಿಂ ಸಮುದಾಯದ ಮುಖಂಡರು ಮಾತನಾಡಿ, ಮೊಹಮ್ಮದ್ ಪೈಗಂಬರ್ ಅವರ 1500ನೇ ಹುಟ್ಟು ಹಬ್ಬ ಆಗಿದ್ದು, ನಾವು ವಿಜೃಂಭಣೆಯಿಂದ ಆಚರಣೆ ಮಾಡಬೇಕಾಗಿದೆ. ಪೊಲೀಸರಿಗೆ ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.‌

ಇದನ್ನೂ ಓದಿ: ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಕಾಂತರಾಜು, ಟ್ರಾಫಿಕ್ ಇನ್ಸ್ಪೆಕ್ಟರ್ ಲೊಕೇಶ್,‌ ಗಲ್ ಕಾಂತರಾಜು, ಪೇಟೆ ಪೊಲೀಸ್ ಇನ್ಸ್ಪೆಕ್ಟರ್ ವಿಠಲ್, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಹಲವಾರು ಸಂಘಟನೆಗಳ ಯುವಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...