ಕೋಲಾರ | ನಗರಸಭೆ ಅನುದಾನದಿಂದಲೇ ಫುಡ್‌ ಕೋರ್ಟ್‌ ನಿರ್ಮಾಣ: ಲಕ್ಷ್ಮಿದೇವಮ್ಮ

Date:

ಸಾರ್ವಜನಿಕರ ಅನುಕೂಲಕ್ಕಾಗಿ ಕೋಲಾರ ನಗರದ ಸರ್ವಜ್ಞ ಪಾರ್ಕ್‌ ಬಳಿ ನಗರಸಭೆ ಅನುದಾನದಿಂದ ಫುಡ್‌ ಕೋರ್ಟ್‌ ನಿರ್ಮಾಣ ಮಾಡಲಾಗಿದೆ ಎಂದು ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಮೇಶ್‌ ತಿಳಿಸಿದರು.

ನಗರಸಭೆಯ ಸ್ವಂತ ನಿಧಿ ₹13.50 ಲಕ್ಷ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ₹20.31 ಲಕ್ಷ ಸೇರಿ ಒಟ್ಟು ₹33.81 ಲಕ್ಷ ವೆಚ್ಚದಲ್ಲಿ ಫುಡ್‌ ಕೋರ್ಟ್‌ ನಿರ್ಮಿಸಲಾಗಿದೆ ಎಂದು ಶನಿವಾರ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ನಗರಸಭೆ ಆಡಳಿತಾಧಿಕಾರಿಯಾಗಿದ್ದಾಗ ಶಾಸಕ ಕೊತ್ತೂರು ಜಿ.ಮಂಜುನಾಥ್‌ ಅವರ ಮುತುವರ್ಜಿಯಿಂದ ಫುಡ್‌ ಕೋರ್ಟ್‌ ನಿರ್ಮಾಣ ಆರಂಭವಾಯಿತು. ನಾವು ಅಧಿಕಾರಕ್ಕೆ ಬಂದ ಮೇಲೆ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದೆವು. ಈಗ ನಿರ್ಮಾಣ ಪೂರ್ಣಗೊಂಡಿದ್ದು, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಉದ್ಘಾಟಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಹಂತಗಳಲ್ಲಿ ಕಾಮಗಾರಿ ನಡೆದಿದೆ. ಮೊದಲ ಹಂತದಲ್ಲಿ ನಗರಸಭೆಯ ಸ್ವಂತ ಅನುದಾನವಾದ ₹ 13.50 ಲಕ್ಷದಲ್ಲಿ ಫುಡ್‌ ಕೋರ್ಟ್‌ಗೆ ಫುಟ್‌ಪಾತ್‌ ನಿರ್ಮಿಸುವ ಕೆಲಸ ನಡೆದಿದೆ. ಇನ್ನು 2024–25ನೇ ಸಾಲಿನಲ್ಲಿ ಸರ್ಕಾರ ಬಿಡುಗಡೆ ಮಾಡಿರುವ 15ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನ ₹ 33.81 ಕೋಟಿಯಲ್ಲಿ ಫುಡ್‌ ಕೋರ್ಟ್‌ನ ಶೆಲ್ಟರ್‌ ನಿರ್ಮಿಸಲಾಗಿದೆ. ನಗರಸಭೆ ಸಾಮಾನ್ಯ ಸಭೆಯದಲ್ಲಿ ತೀರ್ಮಾನದಂತೆ ಕೆಲಸ ನಡೆದಿದೆ. ಫುಡ್‌ ಕೋರ್ಟ್‌ ನಿರ್ಮಾಣಕ್ಕೆ ಸಿಎಸ್‌ಆರ್‌ ನಿಧಿ ಸೇರಿದಂತೆ ಬೇರೆ ಯಾವುದೇ ಅನುದಾನ ಬಳಸಿಕೊಂಡಿಲ್ಲ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

“ಆ ಭಾಗದ ಬೀದಿ ಬದಿಯಲ್ಲಿ ಹಲವಾರು ಮಂದಿ ಬೀದಿ ಬದಿ ತಿನಿಸು ಅಂಗಡಿ ಇಟ್ಟುಕೊಂಡಿದ್ದರು. ಅವರಿಗೆ ಫುಡ್ ಕೋರ್ಟ್‌ನಲ್ಲಿ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದೇವೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಅವರ ಪಟ್ಟಿ ನಮ್ಮ ಬಳಿ ಇದೆ. ನಗರಸಭೆ ಸಮಿತಿ ಸಭೆಯಲ್ಲಿ ಚರ್ಚಿಸಿ ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ಪೌರಾಯುಕ್ತರ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳುತ್ತೇವೆ. ಫುಡ್‌ ಕೋರ್ಟ್‌ನಲ್ಲಿ 27 ಕೌಂಟರ್‌ಗಳಿದ್ದು, ತಿನಿಸು ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಈ ಭಾಗದಲ್ಲಿ ಶಾಖಾಹಾರಕ್ಕೆ ಮಾತ್ರ ಅನುಮತಿ ನೀಡಲಾಗುವುದು. ಮಾಂಸಾಹಾರ ತಿನಿಸುಗಳ ಫುಡ್‌ ಕೋರ್ಟ್‌ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...