ಕೋಲಾರ | ಅಕ್ರಮವಾಗಿ ಗಣಿಗಾರಿಕೆ: ರಾಜಕೀಯ ಒತ್ತಡಕ್ಕೆ ಮಣಿಯದೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ

Date:

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಗಣಿ ಇಲಾಖೆ ಅಧಿಕಾರಿಗಳ ಬೆಂಬಲದಿಂದಲೇ ಅಕ್ರಮವಾಗಿ ಗಣಿಗಾರಿಕೆ ನಡೆಸಿ, ಕೋಟ್ಯಂತರ ರೂಪಾಯಿ ಹಣ ಲೂಟಿ ಮಾಡುತ್ತಿದ್ದು, ಪರಿಸರ ಹಾಳಾಗಿತ್ತಿರುವುದಲ್ಲದೆ ಸರ್ಕಾರಕ್ಕೆ ಬರಬೇಕಾಗಿದ್ದ ಕೋಟ್ಯಂತರ ಹಣ ಕಳ್ಳರ ಪಾಲಾಗುತ್ತಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ರಾಜಕೀಯ ಒತ್ತಡಗಳಿಗೆ ಮಣಿಯದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಡಿ ಮುನೇಶ್ ಹಾಗೂ ನವೀನ್ ಕುಮಾರ್ ಅವರು ಒತ್ತಾಯಿಸಿದರು.

ಮಾಲೂರು ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಅವರುಗಳು ಮಾತನಾಡಿ, “ಗಣಿಮಾಲೀಕರ ಸಂಘದ ಅಧ್ಯಕ್ಷ ಕ್ಷೇತ್ರನಹಳ್ಳಿ ಕೆ ಎಸ್ ವೆಂಕಟೇಶಪ್ಪ ಅವರು ಮಾಲೂರು ಶಾಸಕ ಕೆ ವೈ ನಂಜೇಗೌಡರ ಬೆಂಬಲ ಹಾಗೂ ಭ್ರಷ್ಟ ಗಣಿ ಅಧಿಕಾರಿ ರಾಜೇಶ್ ಸಹಕಾರದಿಂದ ಕಾನೂನು ಬಾಹಿರವಾಗಿ, ನಿಯಮಗಳನ್ನು ಗಾಳಿಗೆ ತೂರಿ ಐಶ್ವರ್ಯ ಕ್ರಷರ್ ಘಟಕದ ಮೂಲಕ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ತಿಮ್ಮನಾಯಕನ ಹಳ್ಳಿ ಅಗ್ರಹಾರದ ಸರ್ವೆ ನಂ. 35ರಲ್ಲಿ ಭೂಮಿ ಮೇಲಿರುವ ಬಂಡೆಯನ್ನು ಕಬಳಿಸಿ, ಅಕ್ರಮವಾಗಿ ತೆಗೆದು ಕೇವಲ 23 ಸಾವಿರ ಟನ್‌ಗೆ ಮಾತ್ರ ರಾಯಲ್ಟಿ ಪಾವತಿಸಿದ್ದು, ಇದರಲ್ಲಿ ಸುಮಾರು ₹50 ಕೋಟಿಗೂ ಹೆಚ್ಚು ಹಗರಣ ನಡೆದಿದೆ” ಎಂದು ಆರೋಪಿಸಿದರು.

“ಇದೇ ರೀತಿ ಮಾಲೂರು ತಾಲೂಕು ವ್ಯಾಪ್ತಿಯಲ್ಲಿ 100 ಎಕರೆಗೂ ಹೆಚ್ಚು ಬಫರ್ ಜೋನ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಸುಮಾರು ₹3,000 ಕೋಟಿ ಮೌಲ್ಯದ ಹಗರಣ ನಡೆದಿದೆ. ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸಿ ಪರಿಸರ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲು
ಸೂಚಿಸಿದ್ದು, ಕ್ರಷರ್ ಘಟಕಗಳಿಗೆ ಎನ್‌ಪಿಡಿ ಜಾರಿ ಮಾಡಿ ಗಣಿ ಮಾಲೀಕರು ಉತ್ತರ ನೀಡದೇ ಇದ್ದಾಗ ಕ್ರಷರ್ ಘಟಕ ಬಂದ್ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ. ಕ್ರಷರ್ ಸ್ಥಗಿತಗೊಳಿಸಿ ಏರ್ ಚೆಕಿಂಗ್ ಮಾಡುತ್ತಿದ್ದು, ಸುಳ್ಳು ವರದಿ ಸಿದ್ದಪಡಿಸಲು ಯತ್ನ ನಡೆಯುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆದಿಮ ರಂಗಶಾಲೆಯ ಗಾಯಕರೇ ನಾಯಕರಾಗಿರುವ ನೆಲ ಕೋಲಾರ: ರಾಜಪ್ಪ ದಳವಾಯಿ

ಗಣಿಗಾರಿಕೆ ವೇಳೆ ಕಾರ್ಮಿಕರು ಮೃತಪಟ್ಟರೂ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸದೆ ಕಾರ್ಮಿಕರ ಮೇಲೆಯೇ ಕೇಸು ದಾಖಲಿಸುತ್ತಿದ್ದು, ಇದರ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳು ಸೂಕ್ತ ಕ್ರಮ ಜರುಗಿಸುವಂತೆ ಮನವಿ
ಮಾಡಿದರಲ್ಲದೆ, ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡುವಂತೆ ಇ.ಡಿಗೆ ದೂರು ಸಲ್ಲಿಸುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...