ಕೋಲಾರ | ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ಸೆ.3 ರಿಂದ ಹತ್ತು ದಿನಗಳ ಸೀರತ್ ಅಭಿಯಾನ

Date:

ಕೋಲಾರ ಜಿಲ್ಲಾ ಜಮಾತೆ ಇಸ್ಲಾಮೀ ಹಿಂದ್ ವತಿಯಿಂದ ʼನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ʼ ಎಂಬ ಧ್ಯೇಯ ವಾಕ್ಯದಡಿ ಅವರ ಸಾರ್ವಕಾಲಿಕ ಬೋಧನೆಗಳನ್ನು ಹಾಗೂ ಪ್ರವಾದಿ ಜೀವನ ಸಂದೇಶ ಅಭಿಯಾನವನ್ನು ಜನತೆಗೆ
ತಿಳಿಸಲು ಸೆಪ್ಟೆಂಬರ್ 3‌ (ನಾಳೆ)ರಿಂದ ಅಕ್ಟೋಬರ್ 14 ರವರೆಗೆ 10 ದಿನಗಳ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು
ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಅಮ್ಜದ್ ಅಲಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, “ರಾಜ್ಯಾದ್ಯಂತ ನಡೆಯಲಿರುವ ಈ ಅಭಿಯಾನದಲ್ಲಿ ಪ್ರವಾದಿಯವರ ಕುರಿತು ಪುಸ್ತಕ ಬಿಡುಗಡೆ, ಕಿರು ಹೊತ್ತಿಗೆ ವಿತರಣೆ, ವಿಚಾರಗೋಷ್ಟಿ, ಸಮಾವೇಶಗಳು, ಪ್ರಬಂಧ ಸ್ಪರ್ಧೆ, ರಕ್ತದಾನ ಶಿಬಿರ, ಶುಚಿತ್ವ ಅಭಿಯಾನ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮ ಭೇಟಿ, ರೋಗಿಗಳಿಗೆ ಹಣ್ಣು ಹಂಪಲು ವಿತರಣೆಯಂತಹ ಸಮಾಜ ಸೇವಾ ಚಟುವಟಿಕೆಗಳು ಹಾಗೂ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.

ಅಲ್ಪಸಂಖ್ಯಾತರ ಸಮುದಾಯದ ಮುಖಂಡ ಅನ್ವರ್ ಪಾಷ ಮಾತನಾಡಿ, “ಪ್ರವಾದಿ ಮುಹಮ್ಮದ್ ರವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮೀಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ. ಪರಸ್ಪರ ತಪ್ಪುಕಲ್ಪನೆಗಳು, ಪೂರ್ವಗ್ರಹಗಳು, ದ್ವೇಷದ ವಾತಾವರಣವನ್ನು ನಿವಾರಿಸಿ ಶಾಂತಿ, ಸಹಬಾಳ್ವೆ ಪರಸ್ಪರರನ್ನು ಅರಿಯುವಂತಹ ಉದ್ದೇಶದಿಂದ ಜಮಾತೆ ಇಸ್ಲಾಮಿ ಹಿಂದ್ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜನತೆಯ ಸಹಕಾರವನ್ನು ಕೋರಲಾಗಿದೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಭೀಮ ಪ್ರಜಾ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಮಾಜಿ ಅಧ್ಯಕ್ಷ  ಮುಬಾರಕ್ ಬಾಗ್ಬಾನ್, ತಾಲೂಕು ಅಧ್ಯಕ್ಷ ಅಜ್ಮಲ್ ಖದೀರ್, ‌ಖಜಾಂಜಿ ರುಹುಲ್ಲಾ ಬೇಗ್ ಹಾಗೂ ಜಮಾತೆ ಇಸ್ಲಾಮಿ ಹಿಂದ್ ನ ಸದಸ್ಯರುಗಳಾದ ನಗರ ಸಭೆ ಮಾಜಿ ಸದಸ್ಯ ಸಲಾವುದ್ದೀನ್ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಅಪ್ರೋಜ್, ಅಮ್ಜದ್, ಮುಜಾಮುಲ್, ಅಯುಬ್ ಖಾನ್, ನಫೀಜ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...