ಕೋಲಾರ | ಕೋಮುಲ್ ಚುನಾವಣಾ ಫಲಿತಾಂಶ; ಹದಿಮೂರರಲ್ಲಿ 9 ಕಾಂಗ್ರೆಸ್‌ ತೆಕ್ಕೆಗೆ

Date:

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ ಎನ್ನುವ ನಿರೀಕ್ಷೆ ಮೂಡಿದೆ.

13 ನಿರ್ದೇಶಕರ ಸ್ಥಾನಗಳ ಪೈಕಿ ಕಾಂಗ್ರೆಸ್​ ಬೆಂಬಲಿತ 9 ಮಂದಿ ಅಭ್ಯರ್ಥಿಗಳ ಗೆಲುವು ಸಾಧಿಸಿದರೆ, ಎನ್‌ಡಿಎ (ಜೆಡಿಎಸ್-ಬಿಜೆಪಿ) ಬೆಂಬಲಿತ 4 ಮಂದಿ ಅಭ್ಯರ್ಥಿಗಳ ಗೆಲುವಾಗಿದೆ. ಈ ಪೈಕಿ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಮಾಲೂರು ಶಾಸಕ ಕೆ ವೈ ನಂಜೇಗೌಡ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್​ ಶಾಸಕರ ಮಧ್ಯೆಯೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗುತ್ತಿದೆ.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶಾಂತಿಯುತವಾಗಿ ಮತದಾನ ನಡೆದ ಬಳಿಕ, ಸಂಜೆ ವೇಳೆಗೆ ಮತ ಎಣಿಕೆ ಕಾರ್ಯ ಪೂರ್ಣಗೊಂಡಿತು. ಈ ಬಾರಿ ಚುನಾವಣೆ ಅತ್ಯಂತ ತೀವ್ರ ರಾಜಕೀಯ ಸ್ಪರ್ಧೆಯ ನಡುವೆಯೇ ನಡೆದಿದ್ದು, ಜೆಡಿಎಸ್-ಬಿಜೆಪಿ ಮೈತ್ರಿ, ಕಾಂಗ್ರೆಸ್ ಹಾಗೂ ಕೆ.ಎಚ್. ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳ ನಡುವೆ ಕಾದಾಟ ಜೋರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇಮಗಲ್ ಕ್ಷೇತ್ರದಿಂದ ಬಿ ರಮೇಶ್ (ಕಾಂಗ್ರೆಸ್), ಮಾಲೂರು ಕಸಬಾ ಕ್ಷೇತ್ರದಿಂದ ಎಂ ಎನ್ ಶ್ರೀನಿವಾಸ್ (ಕಾಂಗ್ರೆಸ್)‌, ಶ್ರೀನಿವಾಸಪುರ ಅಡ್ಡಗಲ್​ ಕ್ಷೇತ್ರದಿಂದ ಕೆ ಕೆ ಮಂಜುನಾಥ್ (ಕಾಂಗ್ರೆಸ್)‌, ಶ್ರೀನಿವಾಸಪುರ ಯಲ್ದೂರು ಕ್ಷೇತ್ರದಿಂದ ಹನುಮೇಶ್ (ಕಾಂಗ್ರೆಸ್)‌, ಬಂಗಾರಪೇಟೆ ಕ್ಷೇತ್ರದಿಂದ ಎಸ್ ಎನ್ ನಾರಾಯಣಸ್ವಾಮಿ (ಕಾಂಗ್ರೆಸ್)‌, ಕೆಜಿಎಫ್ ಕ್ಷೇತ್ರದಿಂದ ಜಯಸಿಂಹಕೃಷ್ಣಪ್ಪ (ಕಾಂಗ್ರೆಸ್)‌, ಕೋಲಾರ ಜಿಲ್ಲಾ ಮಹಿಳಾ ಉತ್ತರ ಕ್ಷೇತ್ರದಿಂದ ಮಹಾಲಕ್ಷ್ಮಿ (ಕಾಂಗ್ರೆಸ್), ಕೋಲಾರ ಜಿಲ್ಲಾ ಮಹಿಳಾ ದಕ್ಷಿಣ ಕ್ಷೇತ್ರದಿಂದ ಕಾಂತಮ್ಮ (ಕಾಂಗ್ರೆಸ್)‌, ಚಂಜಿ ಮಲೆ ಕ್ಷೇತ್ರದಿಂದ ರಮೇಶ್ ನಾಗನಾಳ (ಕಾಂಗ್ರೆಸ್), ಮುಳಬಾಗಿಲು ಪೂರ್ವ ಕ್ಷೇತ್ರದಿಂದ ಕೆ ಎಸ್ ನಾಗರಾಜ್ (ಮೈತ್ರಿ), ಮುಳಬಾಗಿಲು ಪಶ್ಚಿಮ ಕ್ಷೇತ್ರದಿಂದ ಬಿ ವಿ ಶಾಮೇಗೌಡ (ಮೈತ್ರಿ), ವಡಗೂರು ಕ್ಷೇತ್ರದಿಂದ ಡಿ.ವಿ. ಹರೀಶ್ (ಮೈತ್ರಿ), ಕೋಲಾರ ನೈರುತ್ಯ ಕ್ಷೇತ್ರದಿಂದ ಡಿ ನಾಗರಾಜ್​ (ಮೈತ್ರಿ) ಜಯಶಾಲಿಗಳು.

ಇದನ್ನೂ ಓದಿ: ಕೋಲಾರ | ವೇಮಗಲ್‌ನಲ್ಲಿ ಇಂದಿರಾ ಕ್ಯಾಂಟಿನ್ ಆರಂಭ

ಕಾಂಗ್ರೆಸ್ ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಎನ್​ಡಿಎ ಬೆಂಬಲಿತ 4 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಮತ ಕೇಂದ್ರದ ಬಳಿಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್​ ಶಾಸಕ ನಂಜೇಗೌಡ, ಹೈಕಮಾಂಡ್​ ತೀರ್ಮಾನ ಮಾಡುವ ಅಭ್ಯರ್ಥಿ ಅಧ್ಯಕ್ಷರಾಗುತ್ತಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...