ಕೋಲಾರ | ಸಹಕಾರ ಸಂಘದಿಂದ ಪತ್ರಕರ್ತರಿಗೆ ಸಾಲ ಸೌಲಭ್ಯ ಶ್ಲಾಘನೀಯ: ಬಿ ವಿ ಗೋಪಿನಾಥ್

Date:

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲ ಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುದೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯ ನಿರ್ವಹಣೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸಂಘದ 2024-25ನೇ ಸಾಲಿನ ಸರ್ವಸದಸ್ಯರ ಸಭೆಗೆ ಚಾಲನೆ ನೀಡಿ, ಯಶಸ್ವಿನಿ ಆರೋಗ್ಯ ವಿಮಾ ಕಾರ್ಡ್ ವಿತರಿಸಿ ಅವರು ಮಾತನಾಡುತ್ತಿದ್ದರು.

ಸಹಕಾರ ಸಂಘ ಕಳೆದ ಐದು ವರ್ಷದಲ್ಲಿ ಸರಾಸರಿ ವರ್ಷಕ್ಕೆ 2 ಲಕ್ಷ ರೂ ಲಾಭ ಗಳಿಸುತ್ತಾ ಬಂದಿದೆ ಎಂದ ಅವರು, ಸಂಘದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಹೆಚ್ಚಬೇಕು. ಸಾಲ ನೀಡುವುದರ ಜತೆಗೆ ಇತರೆ ಲಾಭದಾಯಕ ಚಟುವಟಿಕೆಗಳನ್ನು ಆರಂಭಿಸುವ ಚಿಂತನೆ ನಡೆಯಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ತಮಗೆ ಸಿಕ್ಕಿರುವುದು ಅಧಿಕಾರ ಎಂದು ಭಾವಿಸಬಾರದು. ಅದು ಕೇವಲ ಜವಾಬ್ದಾರಿ ಎಂಬುದನ್ನು ಅರಿತು ಸಂಘವನ್ನು ಮುನ್ನಡೆಸಬೇಕು ಎಂದು ಸಲಹೆ ನೀಡಿದ ಅವರು, ಸಹಕಾರ ಎಂಬ ಪದದಲ್ಲೇ ಹೊಂದಾಣಿಕೆ, ಸೇವೆಯ ಸ್ಮರಣೆ ಇದೆ. ಪರಸ್ಪರ ಸಹಕಾರದಿಂದ ಎಂತಹ ಸಾಧನೆಯನ್ನು ಮಾಡಬಹುದು. ಈ ನಿಟ್ಟಿನಲ್ಲಿ ಸೇವಾ ಮನೋಭಾವದಿಂದ ಸಂಘವನ್ನು ಮುನ್ನಡೆಸಿಕೊಂಡು ಹೋಗಿ ಎಂದು ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಸಾಲ ವಸೂಲಾತಿಯಲ್ಲೂ ದಾಖಲೆ ನಿರ್ಮಿಸಲಾಗಿದೆ. ಶೇ.99 ಸಾಲ ವಸೂಲಾತಿಯಾಗಿದ್ದು, ಯಾವುದೇ ಸುಸ್ತಿ ಬಾಕಿ ಇಲ್ಲ ಎಂದು ತಿಳಿಸಿದರು.

ಸಾಲ ವಸೂಲಿಯಲ್ಲಿ ಸಾಧನೆ ಮಾಡುವ ಉದ್ದೇಶದಿಂದ ಸಂಘದ ನಿರ್ದೇಶಕರಾದ ಸೋಮಶೇಖರ್ ಹಾಗೂ ನಾಗರಾಜಯ್ಯ ಅವರ ನೇತೃತ್ವದಲ್ಲಿ ನೇಮಿಸಿದ್ದ ಉಪಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಸಾಲ ವಸೂಲಿಯಲ್ಲಿ ಗಣನೀಯ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು.

ಛಾಪಾ ಕಾಗದ ಮಾರಾಟಕ್ಕೆ ಅನುಮತಿ

ಸಂಘ ಸದ್ಯ ತನ್ನ ಅಧೀನದಲ್ಲೇ ಛಾಪಾ ಕಾಗದ ಮಾರಾಟ ನಿರ್ವಹಣೆಗೆ ತೊಂದರೆಯಿದ್ದು, ಸದಸ್ಯರು ಯಾರಾದರೂ ಮುಂದೆ ಬಂದಲ್ಲಿ ಸಂಘದ ಅಡಿಯಲ್ಲೇ ಈ ಕಾರ್ಯ ನಡೆಸಲು ಅನುಮತಿ ನೀಡಲಾಗುವುದು ಎಂದ ಅವರು, ಸದಸ್ಯರು ಮುಂದೆ ಬಂದಲ್ಲಿ ನ್ಯಾಯಬೆಲೆ ಅಂಗಡಿ ನಡೆಸಲು ಸಂಘ ಸಿದ್ದವಿದೆ ಎಂದು ತಿಳಿಸಿದರು.

ಹಿರಿಯ ಸದಸ್ಯರಾದ ಅನಂತರಾಮು, ಡಿವಿಡೆಂಟ್‍ಅನ್ನು ಸದಸ್ಯರಿಗೆ ಹಂಚಲು ಸಲಹೆ ನೀಡಿದರೆ, ಸದಸ್ಯ ಸಿ.ಜಿ.ಮುರಳಿ, ಸತತ 3 ಸಭೆಗಳಿಗೆ ಗೈರಾಗುವ ನಿರ್ದೇಶಕರು,ಸದಸ್ಯರಿಗೆ ಮತದಾನದ ಹಕ್ಕು ನೀಡದಂತೆ ಕೋರಿದರು.

WhatsApp Image 2024 08 14 at 7.30.48 AM

ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್ ಆಯವ್ಯಯ ಮಂಡಿಸಿ, ಸಂಘ 11,15,859 ರೂ ನಿವ್ವಳ ಲಾಭ ಗಳಿಸಿದೆ ಎಂದು ಹರ್ಷ ವ್ಯಕ್ತಪಡಿಸಿ, ಇದೇ ಸಂದರ್ಭದಲ್ಲಿ ಮುಂದಿನ 2024-25ನೇ ಸಾಲಿನ ಅಂದಾಜು ಆಯವ್ಯಯ ಮಂಡಿಸಿದರು. ಅದಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಸಕಾಲದಲ್ಲಿ ಸಾಲ ಮರುಪಾವತಿಸುವಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಸದಸ್ಯ ಎನ್.ಆರ್.ಪುರುಷೋತ್ತಮ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸಭೆಗೆ ಸ್ವಾಗತ ಕೋರಿದ ಸಂಘದ ಸಿಇಒ ಗಂಗಾಧರ್ ಅವರಿಗೆ ಗೌರವಧನದ ಚೆಕ್ ವಿತರಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರು ಹಾಗೂ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸದಸ್ಯ ವಿ.ಮುನಿರಾಜು, ಹೆಚ್.ಎನ್.ಮುರಳೀಧರ್, ದಾಸ್, ಸೋಮಶೇಖರ್, ಈಶ್ವರ್, ಶಬ್ಬೀರ್ ಅಹ್ಮದ್, ಹೆಚ್.ಎಲ್. ಸುರೇಶ್, ನಾಗರಾಜಯ್ಯ, ಸಿ.ವಿ.ನಾಗರಾಜ್, ಪತ್ರಕರ್ತರ ಖಜಾಂಚಿ ಎ.ಜಿ.ಸುರೇಶ್‍ ಕುಮಾರ್‍ ಮತ್ತು ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...